ರಾಜ್ಯ

ಟೆಂಡರ್ ನಿಯಮಗಳನ್ನು ಹಗುರವಾಗಿ ತೆಗೆದುಕೊಂಡಿಲ್ಲ: ಎಂ.ಬಿ.ಪಾಟೀಲ್

Manjula VN

ಬೆಂಗಳೂರು: ಟೆಂಡರ್ ಪ್ರಕ್ರಿಯೆಯಲ್ಲಿ ರಾಜ್ಯದ ಯಾವುದೇ ನಿಯಮಗಳನ್ನು ಹಗರುವಾಗಿ ತೆಗೆದುಕೊಂಡಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಶನಿವಾರ ಹೇಳಿದ್ದಾರೆ.

ಮಲಪ್ರಭಾ ಕಾಲುವೆ ನಿರ್ಮಾಣ ಕಾಮಗಾರಿಯಲ್ಲಿ ಕರೆಯಲಾಗಿರುವ ಟೆಂಡರ್ ನಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದ್ದರು, ಜಲ ಸಂಪನ್ಮೂಲ ಸಚಿವರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆಂದು ವಿಧಾನಸಭಾ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಆರೋಪಗಳ ಕುರಿತಂತೆ ನಿನ್ನೆ ಸ್ಪಷ್ಟನೆ ನೀಡಿರುವ ಎಂ.ಬಿ.ಪಾಟೀಲ್ ಅವರು, ಆರೋಪಗಳ ಹಿಂದೆ ಸತ್ಯಾಸತ್ಯತೆಗಳಿಲ್ಲ. ಯಾವುದೇ ಯೋಜನೆಗಳು ಮುಂದೆ ಸಾಗಬೇಕಾದರೆ ಅವುಗಳು ಸಾಕಷ್ಟು ಹಂತಗಳನ್ನು ದಾಟಬೇಕಾಗುತ್ತದೆ.

ಟೆಂಡರ್ ನಲ್ಲಿ ಸರ್ಕಾರದ ಯಾವುದೇ ನಿಯಮಗಳನ್ನು ಹಗುರವಾಗಿ ತೆಗೆದುಕೊಂಡಿಲ್ಲ. ನಿಯಮಗಳನ್ನು ಸರಿಯಾದ ರೀತಿಯಲ್ಲೇ ಪಾಲನೆ ಮಾಡಲಾಗುತ್ತಿದೆ. ಪ್ರಸ್ತುತ ಮಲಪ್ರಭಾದ ಎಡ ಮತ್ತು ಬಲ ದಂಡೆಗಳ ಕಾಲುವೆ ನಿರ್ಮಾಣ ಕಾಮಗಾರಿಯ ಮೊದಲ ಹಂತದಲ್ಲಿದ್ದು, ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

SCROLL FOR NEXT