ಚಿಕ್ಕಮಗಳೂರು: ಸರ್ಕಾರಿ ಬಸ್ ಮತ್ತು ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆಯ ಹೊರವಲಯಲ್ಲಿ ನಡೆದಿದೆ.
ಮೃತರಿಬ್ಬರು ಚಾಲಕರಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಬಸ್ ನಲ್ಲಿದ್ದ ಮೂವರು ಶಾಲಾ ಮಕ್ಕಳು ಸೇರಿದಂತೆ 14 ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತರೀಕೆರೆ ಮತ್ತು ಭದ್ರಾವತಿಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ದಾಖಲಿಸಿಕೊಂಡಿರುವ ತರೀಕೆರೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.