ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪ

ದುಬಾರಿ ವಾಚ್ ವಿವಾದ ಪ್ರಕರಣ ಮುಕ್ತಾಯಗೊಳ್ಳುತ್ತಿದ್ದಂತೆಯೇ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದೆ.

ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ
Srinivas Rao BV
Updated On : 3 Mar 2016, 11:39 am

ಬೆಂಗಳೂರು: ದುಬಾರಿ ವಾಚ್ ವಿವಾದ ಪ್ರಕರಣ ಮುಕ್ತಾಯಗೊಳ್ಳುತ್ತಿದ್ದಂತೆಯೇ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದೆ.
ವಿಧಾನಸಭೆಯಲ್ಲಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಈ ಆರೋಪ ಮಾಡಿದ್ದು ತಮ್ಮ ಫೋನ್ ನನ್ನು ಸಿದ್ದರಾಮಯ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ದುಬಾರಿ ವಾಚ್ ನ ಮೂಲವನ್ನು ಪತ್ತೆ ಹಚ್ಚಲು ಪ್ರಾರಂಭಿಸಿದ ಬಳಿಕ ಕದ್ದಾಲಿಕೆ ನಡೆಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಇನ್ನು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಕೂಡ ಸರ್ಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದ್ದಾರೆ. ತಮ್ಮ ದೂರವಾಣಿಯನ್ನೂ ಸೇರಿದಂತೆ ಹಲವು ವಿಪಕ್ಷ ನಾಯಕರ ದೂರವಾಣಿಯನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕದ್ದಾಲಿಸುತ್ತಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪಕ್ಷದ ಶಾಸಕರು, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments