ಕೆಜೆ ಜಾರ್ಜ್ 
ರಾಜ್ಯ

ರು. 505 ಕೋಟಿ ತೆರಿಗೆ ಸಂಗ್ರಹ ಮಾಡಿ; ಬಿಬಿಎಂಪಿಗೆ ಕೆಜೆ ಜಾರ್ಜ್ ತಾಕೀತು

ಮಾರ್ಚ್ 31 ಪ್ರಸಕ್ತ ವರ್ಷದ ಆಸ್ತಿ ತೆರಿಗೆ ಸಂಗ್ರಹಣೆಗೆ ಕೊನೆಯ ದಿನವಾಗಿದ್ದು, ಈ ಅವಧಿಯಲ್ಲಿ ಗುರಿ ತಲುಪಲು ಬಾಕಿ ಉಳಿದಿರುವ 505 ಕೋಟಿ ತೆರಿಗೆ...

ಬೆಂಗಳೂರು: ಮಾರ್ಚ್ 31 ಪ್ರಸಕ್ತ ವರ್ಷದ ಆಸ್ತಿ ತೆರಿಗೆ ಸಂಗ್ರಹಣೆಗೆ ಕೊನೆಯ ದಿನವಾಗಿದ್ದು, ಈ ಅವಧಿಯಲ್ಲಿ ಗುರಿ ತಲುಪಲು ಬಾಕಿ ಉಳಿದಿರುವ 505 ಕೋಟಿ ತೆರಿಗೆ ಸಂಗ್ರಹ ಮಾಡಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ತಾಕೀತು ಮಾಡಿದರು.

2014–15ನೇ ಸಾಲಿನಲ್ಲಿ ರು 2,900 ಕೋಟಿ ಆಸ್ತಿ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿತ್ತು. ಆದರೆ ಸಂಗ್ರಹವಾಗಿದ್ದು ರು. 1,810 ಕೋಟಿ. ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ ರು. 1784 ಕೋಟಿ ಸಂಗ್ರಹವಾಗಿದೆ’ ಎಂದು ವಿಶೇಷ ಆಯುಕ್ತೆ(ಕಂದಾಯ) ವಿ.ರಶ್ಮಿ ಅವರು ತಿಳಿಸಿದರು.

ಮಹಾದೇವಪುರ, ಬೊಮ್ಮನಹಳ್ಳಿ, ದಾಸರಹಳ್ಳಿಯಂತಹ ಹೊಸ ವಲಯಗಳಲ್ಲಿ ನೂರಾರು ವಾಣಿಜ್ಯ ಸಂಕೀರ್ಣಗಳು ನಿರ್ಮಾಣಗೊಳ್ಳುತ್ತಿವೆ. ಅದೇ ಪ್ರಮಾಣದಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಬೇಕು. ಆದರೆ ಕಂದಾಯ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿಲ್ಲ ಎಂದು ಸಚಿವ ಜಾರ್ಜ್‌ ಅಸಮಾಧಾನ ವ್ಯಕ್ತಪಡಿಸಿದರು.

ಏಪ್ರಿಲ್‌ ತಿಂಗಳ ಮೊದಲನೇ ವಾರದಲ್ಲಿ ಪರಿಶೀಲನಾ ಸಭೆ ನಡೆಸಿ, ಸಾಧನೆ ತೋರದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!