ಸಿಎಂ ಸಿದ್ದರಾಮಯ್ಯ 
ರಾಜ್ಯ

ತಮ್ಮ ಮನೆ ಗೃಹಪ್ರವೇಶಕ್ಕೆ ಗೈರಾದ ಸಿದ್ದರಾಮಯ್ಯ

ಮೈಸೂರು ತಾಲ್ಲೂಕಿನ ಸಿದ್ದರಾಮನಹುಂಡಿಯಲ್ಲಿ ನಡೆದ ಅವರ ನೂತನ ನಿವಾಸದ ಗೃಹಪ್ರವೇಶದಲ್ಲಿ ಪಾಲ್ಗೊಂಡಿರಲಿಲ್ಲ...

ಮೈಸೂರು: ವಾಚ್ ವಿವಾದದಿಂದ ಹೈರಾಣಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ತಾಲ್ಲೂಕಿನ ಸಿದ್ದರಾಮನಹುಂಡಿಯಲ್ಲಿ  ನಡೆದ ಅವರ ನೂತನ ನಿವಾಸದ ಗೃಹಪ್ರವೇಶದಲ್ಲಿ ಪಾಲ್ಗೊಂಡಿರಲಿಲ್ಲ.

ಕಳೆದ ತಿಂಗಳು ಅಂದರೆ ಫೆ. 28 ಮತ್ತು 29ಕ್ಕೆ ನಿಗದಿಯಾಗಿದ್ದ ಗೃಹಪ್ರವೇಶವನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಗ್ರಾಮದಲ್ಲಿ ಈಗ ಸಿದ್ದರಾಮೇಶ್ವರ ಮತ್ತು ಚಿಕ್ಕಮ್ಮ ತಾಯಿ ಜಾತ್ರೆ ಆರಂಭವಾಗಿದ್ದು, ಎರಡೂ ದೇಗುಲಗಳಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ನಿವಾಸದ ಗೃಹಪ್ರವೇಶವನ್ನು ಪುರೋಹಿತರು ಪೂಜಾವಿಧಿಗಳ ಮೂಲಕ ನಡೆಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರ ಪತ್ನಿ ಪಾರ್ವತಿ ಅವರು ಮನೆಯಲ್ಲಿ ಹಾಲು ಉಕ್ಕಿಸಿ ಧಾರ್ಮಿಕ ವಿಧಿ ನೆರವೇರಿಸಿದರು.

ಪುತ್ರರಾದ ರಾಕೇಶ್ ಸಿದ್ದರಾಮಯ್ಯ, ಯತೀಂದ್ರ ಪಾಲ್ಗೊಂಡಿದ್ದರು ಎನ್ನಲಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಮಾರಂಭದಲ್ಲಿ ಪಾಲ್ಗೊಂಡಿರಲಿಲ್ಲ. ಕುಟುಂಬಸ್ಥರನ್ನು ಬಿಟ್ಟು ಬೇರೆ ಯಾರನ್ನೂ ಆಹ್ವಾನಿಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT