ನಿಂತಿದ್ದ ಟಿಪ್ಪರ್ ಗೆ ಲಾರಿ ಡಿಕ್ಕಿ: ನಾಲ್ವರ ದುರ್ಮರಣ
ನಿಲ್ಲಿಸಿದ್ದ ಟಿಪ್ಪರ್ಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತ ಪಟ್ಟಿರುವ ಘಟನೆ ಮಂಗಳೂರಿನ ಬಜ್ಪೆ ಸಮೀಪದ ಎಡಪದವಿನಲ್ಲಿ ನಡೆದಿದೆ.
ಮಂಗಳೂರು:ನಿಲ್ಲಿಸಿದ್ದ ಟಿಪ್ಪರ್ಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತ ಪಟ್ಟಿರುವ ಘಟನೆ ಮಂಗಳೂರಿನ ಬಜ್ಪೆ ಸಮೀಪದ ಎಡಪದವಿನಲ್ಲಿ ನಡೆದಿದೆ.
ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೆ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಇನ್ನು ಹಲವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರ ಹೆಸರು, ವಿಳಾಸ ಗುರುತು ಪತ್ತೆಯಾಗಿಲ್ಲ. ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.