ಗೃಹ ಸಚಿವ ಜಿ. ಪರಮೇಶ್ವರ್ 
ರಾಜ್ಯ

ಪೊಲೀಸರ ವಸತಿ ಸಮಸ್ಯೆಗೆ ಸರ್ಕಾರ ಸ್ಪಂದನೆ: 11,000 ಗೃಹ ನಿರ್ಮಾಣಕ್ಕೆ ಚಿಂತನೆ

ಗ್ರಾಮೀಣ ಪ್ರದೇಶದಲ್ಲಿನ ಪೊಲೀಸ್ ಸಿಬ್ಬಂದಿಗಳ ವಸತಿ ಸಮಸ್ಯೆಗಳಿಗೆ ಸ್ಪಂದನೆ ನೀಡಿರುವ ಸರ್ಕಾರ, ಇದೀಗ ಸಮಸ್ಯೆ ಪರಿಹರಿಸಲು ಬಜೆಟ್ ನಲ್ಲಿ ಪೊಲೀಸ್ ಗೃಹ ಯೋಜನೆಗೆ 1 ಸಾವಿರ ಕೋಟಿ ಮೀಸಲಿಡುವಂತೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಗೃಹ...

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿನ ಪೊಲೀಸ್ ಸಿಬ್ಬಂದಿಗಳ ವಸತಿ ಸಮಸ್ಯೆಗಳಿಗೆ ಸ್ಪಂದನೆ ನೀಡಿರುವ ಸರ್ಕಾರ, ಇದೀಗ ಸಮಸ್ಯೆ ಪರಿಹರಿಸಲು ಬಜೆಟ್ ನಲ್ಲಿ ಪೊಲೀಸ್ ಗೃಹ ಯೋಜನೆಗೆ 1 ಸಾವಿರ ಕೋಟಿ ಮೀಸಲಿಡುವಂತೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಸಮಸ್ಯೆಗಳು ಎದುರಾಗಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ 11 ಸಾವಿರ ಮನೆಗಳನ್ನು ನಿರ್ಮಿಸಲು 1 ಸಾವಿರ ಕೋಟಿ ಅಗತ್ಯವಿದೆ. ಈ ಅನುದಾನ ದೊರತರೆ ಮುಂದಿನ 3 ರಿಂದ 4 ವರ್ಷದ ಅವಧಿಯಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ಹೇಳಿದ್ದಾರೆ.

ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧನಾತ್ಮಕ ಪ್ರತಿಕ್ರಿಯೆ ನೀಡುತ್ತಾರೆಂದು ನಿರೀಕ್ಷೆಗಳಿವೆ. ವಸತಿ ನಿರ್ಮಾಣಕ್ಕೆ 1 ಸಾವಿರ ಕೋಟಿ ಅಗತ್ಯವಿದ್ದು, ಇದೀಗ 500 ಕೋಟಿ ಬಿಡುಗಡೆ ಮಾಡಿ ನಂತರ ದಿನಗಳಲ್ಲಿ ಉಳಿದ ಹಣವನ್ನು ಬಿಡುಗಡೆ ಮಾಡಿದರೆ ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ಪೊಲೀಸ್ ಸಿಬ್ಬಂದಿ ಬಲವನ್ನು ಇದೀಗ 1 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಪ್ರಸ್ತುತ 25 ಸಾವಿರ ಹುದ್ದೆಗಳು ಖಾಲಿಯಿದ್ದು, ಪ್ರತೀ ವರ್ಷ 3 ರಿಂದ 4 ಸಾವಿರ  ಸಿಬ್ಬಂದಿಗಳು ನಿವೃತ್ತಿಗೊಳ್ಳುತ್ತಾರೆ. ಈಗಾಗಲೇ 8 ಸಾವಿರ ಪೇದೆಗಳ ಹುದ್ದೆ ಭರ್ತಿಯ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಉಳಿದ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಸಿಎಂ ಹುಬ್ಲೋಟ್ ವಾಚ್ ಪ್ರಕರಣ ಮುಗಿದ ಅಧ್ಯಾಯ
ದುಬಾರಿ ಬೆಲೆಯ ವಾಚ್ ಗಿಫ್ಟ್ ಪ್ರಕರಣ ಮುಗಿದ ಅಧ್ಯಾಯವಾಗಿದೆ. ಇದೀಗ ಆ ಗಡಿಯಾಗ ಸರ್ಕಾರ ಆಸ್ತಿಯಾಗಿದ್ದು, ಕ್ಯಾಬಿನೆಲ್ ಹಾಲ್ ನಲ್ಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ತಾವು ಸಿದ್ದರಾಮಯ್ಯ ವಿರುದ್ಧ ವರದಿ ಸಲ್ಲಿರುವ ಆರೋಪಗಳನ್ನು ತಳ್ಳಿ ಹಾಕಿರುವ ಅವರು, ಜಿಲ್ಲಾ ಹಾಗೂ ಪಂಚಾಯತ್ ಚುನಾವಣಾ ಫಲಿತಾಂಶ ಕುರಿತಂತೆ ಸೋನಿಯಾ ಅವರಿಗೆ ವಿವರವನ್ನು ನೀಡಿದ್ದೇನೆಯೇ ಹೊರತು ಚರ್ಚೆ ವೇಳೆ ವಾಚ್ ವಿಷಯ ಬಂದಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಪುಟ ಪುನರ್ ರಚನೆ ಕುರಿತಂತೆ ಸಿದ್ದರಾಮಯ್ಯ ಅವರು ಈ ವರೆಗೂ ನನ್ನೊಂದಿಗೆ ಯಾವುದೇ ರೀತಿಯ ಚರ್ಚೆಯನ್ನು ನಡೆಸಿಲ್ಲ. ಪ್ರಸ್ತುತ ಸಿಎಂ ಬಜೆಟ್ ಕುರಿತಂತೆ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ಒಂದು ವೇಳೆ ಈ ಬಗ್ಗೆ ಕೇಳಿದರೆ ನನ್ನ ಪ್ರತಿಕ್ರಿಯೆನ್ನು ನೀಡುತ್ತೇನೆಂದು ಹೇಳಿದ್ದಾರೆ.

ಇದೇ ವೇಳೆ ಕೆಪಿಸಿಸಿ ಕಚೇರಿಗೆ ಹೊಸ ಅಧ್ಯಕ್ಷರ ನೇಮಕಾತಿ ಕುರಿತಂತೆ ಮಾತನಾಡಿರುವ ಅವರು, ನಾನು ಈ ವರೆಗೂ ಐದುವರೆ ವರ್ಷದಿಂದ ಕೆಲಸ ಮಾಡಿದ್ದೇನೆ. ಈ ಬಗ್ಗೆ ಸೋನಿಯಾ ಅವರ ಬಳಿ ಚರ್ಚೆ ನಡೆಸಿಲ್ಲ. ಹೈಕಮಾಂಡ್ ಈ ಬಗ್ಗೆ ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ. ಒಂದು ವೇಳೆ ನೀವೇ ಅಧ್ಯಕ್ಷರಾಗಿ ಮುಂದುವರೆಯುವ ಅವಕಾಶ ದೊರೆತರೆ ಎಂಬ ಪ್ರಶ್ನೆಗೆ ಉತ್ತರಿಸುವ ಅವರು, ಒಂದು ವೇಳೆ ಅವಕಾಶ ದೊರೆತರೆ ಆ ಬಗ್ಗೆ ಆಲೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!