ಸಾಂದರ್ಭಿಕ ಚಿತ್ರ 
ರಾಜ್ಯ

ಏರ್‌ಬ್ಯಾಗ್‌ನಲ್ಲಿ ದೇಹದ ಅರ್ಧ ಭಾಗ: ಕೊಲೆ ಮಾಡಿ ಬ್ಯಾಗ್‌ನಲ್ಲಿ ತುಂಬಿದ್ದ ಕಿರಾತಕರು

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆಯಾಗಿದ್ದು, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಹಂತಕರು ದೇಹದ ಅರ್ಧಭಾಗವನ್ನು ಕತ್ತರಿಸಿ ಬ್ಯಾಗ್‌ನಲ್ಲಿ ತುಂಬಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಸಮೀಪ ವಿರುವ ಖಾಲಿ ನಿವೇಶನದಲ್ಲಿ ಬಿಸಾಡಿ ಹೋಗಿದ್ದಾರೆ...

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆಯಾಗಿದ್ದು, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಹಂತಕರು ದೇಹದ ಅರ್ಧಭಾಗವನ್ನು ಕತ್ತರಿಸಿ ಬ್ಯಾಗ್‌ನಲ್ಲಿ ತುಂಬಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಸಮೀಪ ವಿರುವ ಖಾಲಿ ನಿವೇಶನದಲ್ಲಿ ಬಿಸಾಡಿ ಹೋಗಿದ್ದಾರೆ.

ಪರಪ್ಪನ ಅಗ್ರಹಾರದ ಹೊಸ ರಸ್ತೆಯ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿರುವ ಕೃಷ್ಣಾರೆಡ್ಡಿ ಎಂಬುವರ ಖಾಲಿ ನಿವೇಶನದಲ್ಲಿ ಗುರುವಾರ ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಅನುಮಾಸ್ಪದವಾಗಿ ಏರ್‌ಬ್ಯಾಗ್ ಪತ್ತೆಯಾಗಿತ್ತು. ಹೀಗಾಗಿ ಇದರ ಬಗ್ಗೆ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂಟೆ ಬಿಚ್ಚಿದಾಗ ಪುರುಷನೊಬ್ಬನ ಸೊಂಟದ ಕೆಳಗಿನ ಭಾಗ ಪತ್ತೆಯಾಗಿದೆ. ಕೊಲೆಯಾಗಿರುವ ವ್ಯಕ್ತಿಯ ವಯಸ್ಸು ಅಂದಾಜು 25-30 ವರ್ಷಗಳಿರಬಹುದು. ಮುಖ ಸೇರಿ ಸೊಂಟದ ಮೇಲ್ಭಾಗ ಇಲ್ಲದ ಕಾರಣ, ಮೃತನ ಗುರುತು ಪತ್ತೆ ಸಾಧ್ಯವಾಗಿಲ್ಲ. ದಿಕ್ಕು ತಪ್ಪಿಸುವ ಉದ್ದೇಶದಿಂದಲೇ ದುಷ್ಕರ್ಮಿಗಳು ಈ ರೀತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರಿಂದ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಹೊಸ ರಸ್ತೆ ಜಂಕ್ಷನ್‌ನಲ್ಲಿರುವ ಸಿಸಿ ಕ್ಯಾಮರಾ ದೃಶ್ಯದ ತುಣುಕುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಸಿಸಿಟಿಯಲ್ಲಿ ಸೆರೆಯಾಗಿರುವ ವಿಡಿಯೋ ದೃಶ್ಯಾವಳಿಗಳು ದುಷ್ಕರ್ಮಿಗಳ ಸುಳಿವು ಪತ್ತೆಗೆ ಸಹಕಾರಿಯಾಗಬಹುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದೇ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿದ ಬಳಿಕ ಮೃತನ ಶರೀರವನ್ನು ತುಂಡರಿಸಿ, ಮೂಟೆ ಕಟ್ಟಿದ್ದಾರೆ. ದೇಹದ ಇನ್ನುಳಿದ ಅರ್ಧ ಭಾಗಕ್ಕಾಗಿ ಹುಡುಕಾಟ ನಡೆದಿದೆ. ಒಂದು ವಾರದಿಂದ ಆಗ್ನೇಯ ವಿಭಾಗದ ಠಾಣೆಗಳಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ