ಬೆಂಗಳೂರು: ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರ ಪುತ್ರಿ ಐಶ್ವರ್ಯ ಮತ್ತು ದಿವ್ಯೇಶ್ ಅವರ ವಿವಾಹ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನೆರವೇರಿತು.
ಮದುವೆ ಸಮಾರಂಭದಲ್ಲಿ ಹಲವು ಗಣ್ಯರು ಭಾಗಿಯಾಗಿ ನವ ದಂಪತಿಗೆ ಶುಭ ಕೋರಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ವಿವಾಹಕ್ಕೆ ಹಲವು ಗಣ್ಯರು ಸಾಕ್ಷಿಯಾದರು.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಾಜ್ಯಪಾಲ ವಿ.ಆರ್.ವಾಲಾ, ಗೋವಾ ರಾಜ್ಯಪಾಲ ಮೃದುಲಾ ಸಿನ್ಹಾ, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಗುಜರಾತ್ ಸಿಎಂ ಆನಂದಿಬೆನ್ ಪಟೇಲ್, ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್ ಚವ್ಹಾಣ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್, ರಾಜ್ಯ ಸಚಿವರಾದ ಕೆ.ಜೆ.ಜಾರ್ಜ್, ಡಿ.ಕೆ.ಶಿವಕುಮಾರ್, ಕಿಮ್ಮನೆ ರತ್ನಾಕರ, ಕೇಂದ್ರ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್, ಚಿತ್ರನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರು ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.