ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜುಮನಾಳ ಬಳಿ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಭಾನುವಾರ ನಡೆದಿದೆ.
ವಿಜಯಪುರ ತಾಲೂಕಿನ ಜುಮನಾಳ ಗ್ರಾದ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಎರಡು ಬೈಕ್ ಗಳು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಮುಖಾಮುಖಿಯಾಗಿವೆ. ಈ ವೇಳೆ ಡಿಕ್ಕಿ ಹೊಡೆದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಂದು ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.