ಬೆಂಗಳೂರು: ಮಹಿಳೆಯ ಮೇಲೆ ದೌರ್ಜನ್ಯ ಹೆಚ್ಚಾದಷ್ಟು, ಅದು ದೇಶದ ಆರ್ಥಿಕತೆ ಮೇಲೆ ಪ್ರಭಾವ ಬೀರಲಿದೆ ಎಂದು ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಡೊಮಿನಿಕ್ ಮ್ಕಾಲಿಸ್ಟರ್ ಹೇಳಿದ್ದಾರೆ.
ಕಾನೂನು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಪಿಜಿ ವಿಭಾಗ ಆಯೋಜಿಸಿದ್ದ ವಿಚಾರಣ ಸಂಕಿರಣದಲ್ಲಿ ಮಾತನಾಡಿದ ಅವರು, ಮಹಿಳೆ ಮೇಲಿನ ದೌರ್ಜನ್ಯಗಳು ದೇಶದ ಆರ್ಥಿಕತೆ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದ್ದಾರೆ.
ಮಹಿಳೆ ಮೇಲೆ ನಡೆಯುವ ದೌರ್ಜನ್ಯವನ್ನು ಪ್ರತಿಯೊಬ್ಬರು ತಡೆಯಬೇಕಿದೆ. ಮಹಿಳೆಯರ ಮೇಲೆ ನಡೆಯುವ ಹಿಂಸಾಚಾರವನ್ನು ತಡೆಗಟ್ಟಲು ಆಯೋಗ ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.