ಕಿಲ್ಲರ್ ಬಿಎಂಟಿಸಿ ಮತ್ತೊಂದು ಬಲಿ (ಸಾಂದರ್ಭಿಕ ಚಿತ್ರ) 
ರಾಜ್ಯ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ರಿವರ್ಸ್ ತೆಗೆದುಕೊಳ್ಳುವ ವೇಳೆ ಸಿಲುಕಿಕೊಂಡ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಾಜಿನಗರದಲ್ಲಿ ಸೋಮವಾರ ನಡೆದಿದೆ...

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ರಿವರ್ಸ್ ತೆಗೆದುಕೊಳ್ಳುವ ವೇಳೆ ಸಿಲುಕಿಕೊಂಡ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಾಜಿನಗರದಲ್ಲಿ ಸೋಮವಾರ ನಡೆದಿದೆ.

ಸರೋಜಮ್ಮ (55) ಮೃತ ಮಹಿಳೆ. ಈಕೆ ಬಿಎಂಟಿಸಿಯಲ್ಲಿ ಗುತ್ತಿಗೆದಾರಳಾಗಿ ಕಾರ್ಯನಿರ್ವಹಿಸುತ್ತಿದ್ದಳು. ಎಂದಿನಂತೆ ಇಂದೂ ಸಹ ಸರೋಜಮ್ಮ ಅವರು ಫ್ಲಾಟ್ ನಂ. 5ರಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ನಿಲ್ದಾಣಕ್ಕೆ ಬಂದ ನಂ. ಕೆಎ 01 ಎಫ್ 3165, ಡಿಪೋ 26ರ ಬಿಎಂಟಿಸಿ ಬಸ್ ಮುಂದೆ ಹೋಗಿದೆ. ಬಸ್ ಮುಂದೆ ಹೋಗಿದೆಯೆಂದು ಮಹಿಳೆ ತಮ್ಮ ಕೆಲಸವನ್ನು ಮುಂದುವರೆಸಿದ್ದಾರೆ. ಆದರೆ ಚಾಲಕ ಫ್ಲಾಟಂ ನಲ್ಲಿ ಬಸ್ ನಿಲ್ಲಿಸಲು ರಿವರ್ಸ್ ತೆಗೆದುಕೊಂಡಿದ್ದಾರೆ. ಈ ವೇಳೆ ಬಸ್ಸನ್ನು ಗಮನಿಸದ ಸರೋಜಮ್ಮ ಅವರು ಬಸ್ಸಿನ ಕೆಳಗೆ ಸಿಲುಕಿಕೊಂಡು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಪ್ರಸ್ತುತ ಸ್ಥಳಕ್ಕಾಗಮಿಸಿರುವ ಶಿವಾಜಿನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಸರೋಜಮ್ಮ ಅವರ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಕಳೆದ ವಾರವಷ್ಟೇ ಇದೇ ರೀತಿಯ ಘಟನೆಯೊಂದು ನಡೆದಿತ್ತು.  18 ವರ್ಷದ ಪ್ಯಾರಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಶವಂತಪುರ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಫ್ಲಾಟ್ ಫಾರಂ ದಾಟುತ್ತಿದ್ದ ವೇಳೆ ಎರಡು ಬಸ್ ಗಳ ನಡುವೆ ಸಿಲುಕಿ ಮೃತಪಟ್ಟಿದ್ದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT