ಏಪ್ರಿಲ್ ನಿಂದ ಬೈಯಪ್ಪನಹಳ್ಲಿ-ನಾಯಂಡಹಳ್ಳಿ ಮೆಟ್ರೋ ಸಂಚಾರ ಆರಂಭ
ಪೂರ್ವ-ಪಶ್ಚಿಮ ಕಾರಿಡಾರ್ ನಲ್ಲಿ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಯ ನಾಯಯಂಡಹಳ್ಳಿ ಜಂಕ್ಷನ್ ವರೆಗಿನ ಒಟ್ಟು...
ಬೆಂಗಳೂರು: ಪೂರ್ವ-ಪಶ್ಚಿಮ ಕಾರಿಡಾರ್ ನಲ್ಲಿ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಯ ನಾಯಯಂಡಹಳ್ಳಿ ಜಂಕ್ಷನ್ ವರೆಗಿನ ಒಟ್ಟು 18 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಏಪ್ರಿಲ್ ನ ಮೊದಲ ವಾರದಲ್ಲಿ ಆರಂಭಗೊಳ್ಳುವ ಸಾಧ್ಯತೆ ಇದೆ.
ಈಗಾಗಲೇ ಬಹುತೇಕ ಪೂರ್ಣಗೊಂಡಿರುವ ಪೂರ್ವ - ಪಶ್ಚಿಮ ಕಾರಿಡಾರ್ ಗಳಿಗೆ ಭೇಟಿ ನೀಡಿದ ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ಮೆಜೆಸ್ಟಿಕ್ ನಿಲ್ದಾಣದಲ್ಲಿ ಪೂರ್ವ ಪಶ್ಚಿಮ ಮಾರ್ಗದ ನಿಲ್ದಾಣ ಕಾಮಗಾರಿ 10 ದಿನಗಳಲ್ಲಿ ಪೂರ್ಣ ಗೊಳ್ಳಲಿದೆ ಎಂದು ಹೇಳಿದ್ದಾರೆ.
ರೈಲ್ವೆ ಸುರಕ್ಷತೆಯಿಂದ ಅನುಮತಿ ದೊರೆತಲ್ಲಿ ಬೈಯಪ್ಪನಹಳ್ಳಿ-ನಾಯಂಡ ಹಳ್ಳಿ ನಡುವಿನ ಇಡೀ 18 ಕಿ.ಮೀ ಉದ್ದದ ಮಾರ್ಗ ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ ಎಂದ ಅವರು, ಮಾರ್ಚ್ 25ರ ನಂತರ ಈ ಮಾರ್ಗದ ಪರಿಶೀಲನೆಗೆ ರೈಲ್ವೆ ಸುರಕ್ಷತಾ ಆಯುಕ್ತರು ಭೇಟಿ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕಬ್ಬನ್ ಪಾರ್ಕ್, ವಿಧನಾಸೌಧ ಮತ್ತು ಕೆಂಪೇಗೌಡ ನೆಲದಾಳದ ನಿಲ್ದಾಣಗಳಿಗೆ ಕೆಜೆ ಜಾರ್ಜ್ ಭೇಟಿ ನೀಡಿ ಪರಿಶೀಲಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.