ಚಿನ್ನದ ಅಂಬಾರಿ 
ರಾಜ್ಯ

ಚಿನ್ನದ ಅಂಬಾರಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಸುಪ್ರೀಂನಲ್ಲಿ ಮೇಲ್ಮನವಿ

ಮೈಸೂರಿನ ಚಿನ್ನದ ಅಂಬಾರಿ ರಾಜ ಮನೆತನದ ಬಳಿಯಿದ್ದು, ಅದನ್ನು ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕೆಂದು ಇತಿಹಾಸ ತಜ್ಞ ಪ್ರೊಫೆಸರ್‌ ...

ಮೈಸೂರು : ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಚಿನ್ನದ ಅಂಬಾರಿ ರಾಜ ಮನೆತನದ ಬಳಿಯಿದ್ದು, ಅದನ್ನು ಸರ್ಕಾರ ತನ್ನ  ಸುಪರ್ದಿಗೆ ಪಡೆಯಬೇಕೆಂದು ಇತಿಹಾಸ ತಜ್ಞ ಪ್ರೊಫೆಸರ್‌ ಪಿ.ವಿ.ನಂಜರಾಜ ಅರಸ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ರಾಜಮನೆತನದ ವಶದಲ್ಲಿರುವ ಚಿನ್ನದ ಅಂಬಾರಿಯನ್ನು ಸರ್ಕಾರದ ವಶಕ್ಕೆ ನೀಡಬೇಕೆಂದು ನಂಜರಾಜ ಅರಸ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ಹಿನ್ನಲೆಯಲ್ಲಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದಾರೆ.

1998 ರ ಕಾಯ್ದೆಯಡಿ ಅಂಬಾರಿಯನ್ನು ಸರ್ಕಾರ ಸುಪರ್ದಿಗೆ ಪಡೆಯಬೇಕು ಮತ್ತು ದಸರಾ ವೇಳೆ ಜಿಲ್ಲಾಡಳಿತ ರಾಜಮನೆತನಕ್ಕೆ ನೀಡುವ ಗೌರವ ಧನ ರದ್ದು ಮಾಡಬೇಕೆಂದು ನಂಜರಾಜ್‌ ಅರಸ್‌ ಅವರು  ಹೈಕೋರ್ಟ್‌ನಲ್ಲಿ ಕಳೆದ ವರ್ಷ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್‌ ಅರ್ಜಿಯನ್ನು ವಜಾ ಗೊಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT