ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರದಾನ ಕಾರ್ಯದರ್ಶಿ ಅಜಯ್ ಸೆಥ್
ಬೆಂಗಳೂರು: ಪರೀಕ್ಷಾ ಕೇಂದ್ರಗಳಿಂದ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
975 ಪರೀಕ್ಷೆ ಕೇಂದ್ರಗಳಲ್ಲೂ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಜಯ್ ಸೆಥ್ ಹೇಳಿದ್ದು, ಈ ಸಂಬಂಧ ಎಲ್ಲಾ ಪರೀಕ್ಷಾ ಮುಖ್ಯಸ್ಥರನ್ನು ವಿಚಾರಣೆ ನಡೆಸಲಾಗಿದೆ. ಎಲ್ಲಿಯೂ ಪತ್ರಿಕೆಯ ಬಂಡಲ್ ಗಳನ್ನು ತೆಗೆದು ನೋಡಲಾಗಿಲ್ಲ ಎಂದು ತಿಳಿದು ಬಂದಿದೆ ಎಂದು ಹೇಳಿದ್ದಾರೆ.
ಪ್ರಶ್ನೆ ಪತ್ರಿಕೆ ಎಲ್ಲಿಂದ ಸೋರಿಕೆಯಾಗಿದೆ ಅಥವಾ ಇಲ್ಲ ಎಂಬುದರ ಬಗ್ಗೆ ನಾನು ಅಂತಿಮ ನಿರ್ಧಾರ ಹೇಳಲಾಗುವುದಿಲ್ಲ. ಏಕೆಂದರೆ, ಪ್ರಶ್ನೆ ಪತ್ರಿಕೆ ಸಿದ್ಧ ಮಾಡುವುದು, ಮುದ್ರಿತ ಹಾಗೂ ವರ್ಗಾವಣೆಯ ಹಂತಗಳಿರುತ್ತವೆ. ಹಾಗಾಗಿ, ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಇನ್ನುಳಿದಿರುವುದರ ಬಗ್ಗೆ ತನಿಖೆ ಹೇಳುತ್ತದೆ ಎಂದು ಅವರು ತಿಳಿಸಿದ್ದಾರೆ.