ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ವಿದ್ಯುತ್ ಪರಿಸ್ಥಿತಿ ಸುಧಾರಿಸಲಿದೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಅಗ್ನಿ ಅನಾಹುತದಿಂದ ದುರಸ್ತಿ ಕಂಡ ಶರಾವತಿ ವಿದ್ಯುದಾಗಾರದ 7ನೇ ಯೂನಿಟ್ ಗೆ ಶುಕ್ರವಾರ ಚಾಲನೆ ಸಿಗಲಿದ್ದು, ರಾಜ್ಯದಲ್ಲಿ ವಿದ್ಯುತ್ ಪರಿಸ್ಥಿತಿ ಸುಧಾರಿಸಲಿದೆ ಎಂದು ಅವರು ಹೇಳಿದ್ದಾರೆ.
ಶರಾವತಿ ವಿದ್ಯುದಾಗಾರದಲ್ಲಿ ಫೆಬ್ರವರಿ 18ರಂದು ಅಗ್ನಿ ಅನಾಹುತವಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಾಗಿತ್ತು. ಶರಾವತಿ ವಿದ್ಯುದಾಗಾರದಿಂದ ಪ್ರತಿ ದಿನ 1,035 ವಿದ್ಯುತ್ ಉತ್ಪಾದನೆಯಾಗುತ್ತಿತ್ತು.
ಈಗ ಶರಾವತಿ ವಿದ್ಯುದಾಗಾರದಲ್ಲಿ 7ನೇ ಘಟಕಕ್ಕೆ ಇಂದು ಚಾಲನೆ ಸಿಗಲಿದ್ದು, ಇದರಿಂದ ಸ್ವಲ್ಪ ಮಟ್ಟಿಗೆ ವಿದ್ಯುತ್ ಸಮಸ್ಯೆ ನಿವಾರಣೆಯಾಗಲಿದೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.