ಬೆಂಗಳೂರು: ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೇಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ...
ಬೆಂಗಳೂರು: ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೇಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಜಯನಗರದ ಅರವಿಂದ್ ವೃತ್ತದ ಬಳಿ ಬೆಳಿಗ್ಗೆ 4.30ಕ್ಕೆ ಈ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಬೇಕ್ ಸವಾರನಿಗೆ ಡಿಕ್ಕಿ ಹೊಡೆದುಕೊಂಡು ಹೋಗಿದೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಂದೀಪ್(25) ಮೃತ ದುರ್ದೈವಿ. ಆರ್ಟ್ ಡಿಸೈನರ್ ಆಗಿರುವ ಸಂದೀಪ್ ಬೆಳಿಗ್ಗೆ 4.30ರ ಸುಮಾರಿಗೆ ಕಚೇರಿಗೆ ತೆರಳುತ್ತಿರಬೇಕಾದರೆ, ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕನ ಪತ್ತೆಗಾಗಿ ಸಿಸಿಟಿವಿ ಫೂಟೇಜ್ ತಪಾಸಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.