ಸಾಂದರ್ಭಿಕ ಚಿತ್ರ 
ರಾಜ್ಯ

ಭಾರತ-ಆಸ್ಟ್ರೇಲಿಯಾ ಮ್ಯಾಚ್ ನೋಡುವ ವೇಳೆ ನಾಯಿ ಬೊಗಳಿದ್ದಕ್ಕೆ ಯುವಕನ ಕೊಲೆ

ಭಾರತ- ಆಸ್ಟ್ರೇಲಿಯಾ ನಡುವೆ ನಡೆಯುತ್ತಿದ್ದ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ವೇಳೆ ನಾಯಿ ಬೊಗಳಿದ್ದಕ್ಕೆ ಯುವಕನನ್ನು ಬಿಯರ್ ಬಾಟಲ್ ನಿಂದ ಇರಿದು ಕೊಲೆ ಮಾಡಿರುವ ಘಟನೆ ...

ಬೆಂಗಳೂರು:  ಭಾರತ- ಆಸ್ಟ್ರೇಲಿಯಾ ನಡುವೆ ನಡೆಯುತ್ತಿದ್ದ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ವೇಳೆ ನಾಯಿ ಬೊಗಳಿದ್ದಕ್ಕೆ ಯುವಕನನ್ನು ಬಿಯರ್ ಬಾಟಲ್ ನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಸಿ ನಗರದಲ್ಲಿ ನಡೆದಿದೆ.

ಜೆಸಿ ನಗರದ ಎಸ್‍ಕೆ ಗಾರ್ಡನ್‍ನಲ್ಲಿ ಈ ದಾರುಣ ಘಟನೆ ನಡೆದಿದ್ದು, ಕೊಲೆಯಾದ ಯುವಕನನ್ನು ತೃತೀಯ ಬಿಕಾಂ ಓದುತ್ತಿದ್ದ ಅವಿನಾಶ್ ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ಜೆಸಿ ನಗರದಲ್ಲಿ ದೊಡ್ಡ ಪ್ರೊಜೆಕ್ಟರ್ ಅಳವಡಿಸಿಕೊಂಡು ಹಲವು ಮಂದಿ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದರು. ಈ ವೇಳೆ ಅವಿನಾಶ್ ಮನೆಯ ನಾಯಿ ಬೊಗಳಲು ಆರಂಭಿಸಿದೆ. ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದ್ದ ವೇಳೆಯೇ ನಾಯಿ ಬೊಗಳುತ್ತಿರುವುದು ಅಲ್ಲಿದ್ದ ಯುವಕರ ಆಕ್ರೋಶಕ್ಕೆ ಕಾರಣವಾಗಿ ನಾಯಿಯನ್ನು ಒಳಗೆ ಕೂಡಿ ಹಾಕಲು ಯುವಕರ ಗುಂಪೊಂದು ಹೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಅವಿನಾಶ್ ಜೋರಾಗಿ ಸೌಂಡ್ ಇಟ್ಟು ಮ್ಯಾಚ್ ನೋಡುವಂತೆ ಹೇಳಿದ್ದಾನೆ. ಇದರಿಂದ ಕುಪಿತಗೊಂಡ ಕೆನಡಿ ಎಂಬಾತ  ತನ್ನ ಬಳಿಯಿದ್ದ ಬಿಯರ್ ಬಾಟಲ್ ನಿಂದ ಅವಿನಾಶ್ ಗೆ ಚುಚ್ಚಿದ್ದಾನೆ. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದು ಹಲವರಿಗೆ ಗಾಯಗಳಾಗಿವೆ. ಇನ್ನು ಅವಿನಾಶ್ ಮೃತಪಟ್ಟಿದ್ದು, ಜೆ ಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆನಡಿ ಮತ್ತು ಆತನ ಗೆಳೆಯನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT