ಹೈಕೋರ್ಟ್ 
ರಾಜ್ಯ

ಎಸಿಬಿ ರಚನೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಗೆ ಸಂಬಂಧಿಸಿದಂತೆ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ...

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಗೆ ಸಂಬಂಧಿಸಿದಂತೆ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. 
ಲೋಕಾಯುಕ್ತ ಸಂಸ್ಥೆ ಸ್ಥಗಿತಗೊಂಡಿರುವ ಕಾರಣ ಹಾಗೂ ಎಸಿಬಿ ಇನ್ನೂ ಕಾರ್ಯರಂಭ ಮಾಡದ ಪರಿಣಾಮ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್ ನ್ಯಾಯಾಮೂರ್ತಿ ಎಎನ್ ವೇಣುಗೋಪಾಲ ಗೌಡ ಅವರು, ಭ್ರಷ್ಟಾಚಾರಿಗಳ ವಿರುದ್ಧ ದೂರು ನೀಡಲು ಇವತ್ತು ಲೋಕಾಯುಕ್ತವೂ ಇಲ್ಲ, ಎಸಿಬಿಯೂ ಇಲ್ಲ. ಹೀಗೇ ಆದರೆ ಭ್ರಷ್ಟರು ದೇಶ ಬಿಟ್ಟು ಹಾರಿ ಹೋಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. 
ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಜನರ ಪಾಲಿಗೆ ಇದ್ದ ಏಕೈಕ ಸಂಸ್ಥೆ ಸ್ಥಗಿತಗೊಳಿಸಿ, ಪರ್ಯಾಯವಾಗಿ ಎಸಿಬಿ ರಚನೆ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ ಅವರು, ನಿವೃತ್ತ ನ್ಯಾಯಮೂರ್ತಿಗಳಿರುವ ಲೋಕಾಯುಕ್ತಕ್ಕಿಂತ ಬೇರೆ ಸಂಸ್ಥೆಯಿಂದ ಉತ್ತಮ ಆಡಳಿತ ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. 
ಕಳೆದ 15 ದಿನಗಳಿಂದ ಲೋಕಾಯುಕ್ತಕ್ಕಾಗಲಿ, ಎಸಿಬಿಗಾಗಲಿ ಭ್ರಷ್ಟಾಚಾರದ ದೂರುಗಳು ಬರುತ್ತಿಲ್ಲ. ಇದೇ ರೀತಿ ಮುಂದುವರೆದರೆ, ಭ್ರಷ್ಟಾಚಾರಿಗಳು ದೇಶವನ್ನು ಬಿಟ್ಟು ಹೋಗುತ್ತಾರೆ. 
ನೀವು ಎಸಿಬಿ ರಚನೆ ಮಾಡಿರುವುದಕ್ಕೆ ನಾವು ವಿರೋಧ ವ್ಯಕ್ತಪಡಿಸುತ್ತಿಲ್ಲ. ಭ್ರಷ್ಟಾಚಾರ ನಿಗ್ರಹಕ್ಕೆ ಯಾವ ಸಂಸ್ಥೆಯನ್ನು ಬೇಕಾದರೂ ರಚಿಸಿ. ಆದರೆ ನಮ್ಮ ಪೂರ್ವಜರು ರಚಿಸಿರುವ ಸಂಸ್ಥೆಯನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.  
ಲೋಕಾಯುಕ್ತ ಪೊಲೀಸರ ಕಾರ್ಯ ವೈಖರಿ ವಿರುದ್ಧ ಮಂಡ್ಯದ ಡಾ.ವಿ ಎಸ್ ನಂದೀಶ್ ದಾಖಲಿಸಿರುವ ಕ್ರಿಮಿನಲ್ ಅರ್ಜಿಗೆ ಸಂಬಂಧಿಸಿದಂತೆ ನ್ಯಾ. ಎಎನ್ ವೇಣುಗೋಪಾಲ ಗೌಡ ಅವರಿದ್ದ ಏಕಸದಸ್ಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು. 
ಈ ವೇಳೆ ಸರ್ಕಾರವನ್ನು ಮೌಖಿಕವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಾಮೂರ್ತಿಗಳು, ಮಾರ್ಚ್ 14 ರಂದು ಎಸಿಬಿ ರಚನೆ ಕುರಿತು ಅಧಿಸೂಚನೆ ಹೊರಡಿಸಿದ್ದೀರಿ. ಇಲ್ಲಿಯವರೆಗೆ ಎಸಿಬಿಗೆ ಯಾರಾದರೂ ಭ್ರಷ್ಟಾಚಾರದ ಕುರಿತು ದೂರು ನೀಡಿದ್ದಾರೆಯೇ? ಅದರ ಕಚೇರಿ ಎಲ್ಲಿದೆಯೆಂಬುದು ತಿಳಿದಿದೆಯೇ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ