ಸಾಂದರ್ಭಿಕ ಚಿತ್ರ 
ರಾಜ್ಯ

ರಾಜಧಾನಿಯಲ್ಲಿ ಮತ್ತೆ ಆಫ್ರಿಕನ್ ವಿದ್ಯಾರ್ಥಿಗಳ ಪುಂಡಾಟ

ಬೆಂಗಳೂರಿನಲ್ಲಿ ಮತ್ತೆ ಆಫ್ರಿಕನ್ ವಿದ್ಯಾರ್ಥಿಗಳ ಪುಂಡಾಟ ಮುಂದುವರೆದಿದೆ. ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಮನೆ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಆಫ್ರಿಕನ್ ವಿದ್ಯಾರ್ಥಿಗಳ ಪುಂಡಾಟ ಮುಂದುವರೆದಿದೆ. ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಮನೆ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾರೆ.

ಬಾಣಸವಾಡಿಯ ಕುಳ್ಳಪ್ಪ ಸರ್ಕಲ್ ನಿವಾಸಿ ಕಾರ್ತಿಕ್ ಮೇಲೆ ಹಲ್ಲೆ ಮಾಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆ ಬಾಡಿಗೆಗೆ ಬಂದಿದ್ದ ಕಾಂಗೋ ದೇಶದ ಎರೀನ್ ಮತ್ತು ರಂಜಾನಿ ಮೊದಲು ಇಬ್ಬರಿಗಾಗಿ ಬಾಡಿಗೆ ಪಡೆದಿದ್ದರು. ಆದರೆ ಇತ್ತೀಚೆಗೆ 7-8 ಮಂದಿ ವಾಸವಿದ್ದರು. ಅಲ್ಲದೇ ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಿದ್ದರು.

ನಿನ್ನೆ ರಾತ್ರಿ 11 ಗಂಟೆಯ ವೇಳೆ ಗಲಾಟೆ ಮಾಡುತ್ತಿದ್ದಾಗ ಮನೆ ಮಾಲೀಕ ಕಾರ್ತಿಕ್ ಪ್ರಶ್ನಿಸಿದ್ದಕ್ಕೆ ಜತೆಯಾದ ಸ್ನೇಹಿತರು ಸೇರಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಸ್ಥಳೀಯರು ಸಹಾಯಕ್ಕೆ ಬಂದಾಗ ಪರಾರಿಯಾಗಲು ಯತ್ನಿಸಿದ್ದಾರೆ.

ಈ ವೇಳೆ ಸ್ಥಳೀಯರು ಆಫ್ರಿಕನ್ ವಿದ್ಯಾರ್ಥಿಗಳ ಕಾರಿಗೆ ಕಲ್ಲು ತೂರಿದ್ದಾರೆ. ಜತೆಗೆ ಹಲ್ಲೆ ಮಾಡಿದ ವಿದ್ಯಾರ್ಥಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಈ ಬಗ್ಗೆ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ಟೀಮ್ ಇಂಡಿಯಾದ ಸ್ಟಾರ್ ಫಿನಿಷರ್ ರಿಂಕು ಸಿಂಗ್ ತಂದೆ ಖಾನ್‌ಚಂದ್‌ ನಿಧನ

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

SCROLL FOR NEXT