ರಾಘವೇಶ್ವರ ಶ್ರೀಗಳು 
ರಾಜ್ಯ

ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ: ಆರೋಪ ಕೈ ಬಿಟ್ಟ ನ್ಯಾಯಾಲಯ

ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ...

ಬೆಂಗಳೂರು: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ದೊಡ್ಡ ಮುಕ್ತಿ ಸಿಕ್ಕಿದೆ. ಅವರ ವಿರುದ್ಧದ ಆರೋಪವನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಗುರುವಾರ ಕೈಬಿಟ್ಟಿದೆ. ಇದರಿಂದ  ಸುಮಾರು ಎರಡು ವರ್ಷಗಳಿಂದ ಶ್ರೀಗಳು ಮತ್ತು ಗಾಯಕಿ ನಡೆಸುತ್ತಿದ್ದ ಕಾನೂನು ಹೋರಾಟಕ್ಕೆ ಬ್ರೇಕ್ ಬಿದ್ದಂತಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧ 2014ರ ಮಧ್ಯಭಾಗದಲ್ಲಿ  ಗಾಯಕಿ ಪ್ರೇಮಲತಾ ಅತ್ಯಾಚಾರ ಆರೋಪ ಮಾಡಿದ್ದರು. ನಂತರ ನ್ಯಾಯಾಲಯದಲ್ಲಿ ಅನೇಕ ವಾದ-ವಿವಾದಗಳು ನಡೆದಿದ್ದವು.
ಪ್ರಕರಣವನ್ನು ಕೈ ಬಿಡುವಂತೆ ಕೋರಿ ರಾಘವೇಶ್ವರ ಭಾರತೀ ಸ್ವಾಮಿಗಳು ಅರ್ಜಿ ಸಲ್ಲಿಸಿದ್ದರು.ಅದನ್ನು ಪುರಸ್ಕರಿಸಿದ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಇಂದು ಅವರ ವಿರುದ್ಧದ ವಿಚಾರಣೆಯನ್ನು ಕೈಬಿಟ್ಟಿದೆ.

ಈ ಮಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸೆಷನ್ಸ್ ನ್ಯಾಯಾಧೀಶ ಜಿ.ಬಿ.ಮುದಿಗೌಡರ್ ಅವರನ್ನು ಬದಲಾಯಿಸಿ ಬೇರೊಬ್ಬ ನ್ಯಾಯಾಧೀಶರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲಾಗಿತ್ತು.

ಭಕ್ತರ ಹರ್ಷೋದ್ಘಾರ: ರಾಘವೇಶ್ವರ ಶ್ರೀಗಳ ಪರ ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆ ಅವರ ಭಕ್ತವೃಂದದ ಹರ್ಷ ಮುಗಿಲು ಮುಟ್ಟಿದೆ. ಬೆಂಗಳೂರಿನ ಗಿರಿನಗರ ಹಾಗೂ ಶಿವಮೊಗ್ಗದ ಮಠದ ಮುಂದೆ ನೆರೆದಿದ್ದ ಸಾವಿರಾರು ಭಕ್ತರು ಸಂಭ್ರಮದಿಂದ ಸತ್ಯಮೇವ ಜಯತೇ ಎಂದು ಘೋಷಣೆ ಕೂಗಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT