ರಜನಿಕಾಂತ್ ಕಟೌಟ್ ಗೆ ಹಾಲಿನ ಅಭಿಷೇಕ ಮಾಡುತ್ತಿರುವ ಅಭಿಮಾನಿಗಳು 
ರಾಜ್ಯ

ರಜನಿಕಾಂತ್ ಕಟೌಟ್ ಗೆ ಕ್ಷೀರಾಭಿಷೇಕ: ಸೂಪರ್ ಸ್ಟಾರ್ ಗೆ ಕೋರ್ಟ್ ನೋಟಿಸ್

ರಜನಿಕಾಂತ್​ರ ಹೊಸ ಸಿನಿಮಾ ಬಿಡುಗಡೆ ವೇಳೆಯಲ್ಲಿ ಅವರ ಕಟೌಟ್​ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡುವ ಪದ್ಧತಿ ನಿಷೇಧಿಸುವ ಸಂಬಂಧ ಬೆಂಗಳೂರಿನ...

ಬೆಂಗಳೂರು: ರಜನಿಕಾಂತ್​ರ ಹೊಸ ಸಿನಿಮಾ ಬಿಡುಗಡೆ ವೇಳೆಯಲ್ಲಿ ಅವರ ಕಟೌಟ್​ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡುವ ಪದ್ಧತಿ ನಿಷೇಧಿಸುವ ಸಂಬಂಧ ಬೆಂಗಳೂರಿನ ಮೇಯೋ ಹಾಲ್ ಕೋರ್ಟ್  ರಜನಿ ಕಾಂತ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಸಾವಿರಾರು ಮಕ್ಕಳು ಅಪೌಷ್ಟಿಕತೆಯಿಂದ ಕೊನೆಯುಸಿರೆಳೆಯುತ್ತಿದ್ದಾರೆ. ಬಡತನದ ಬೇಗೆಯಲ್ಲಿ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗುತ್ತಿಲ್ಲ. ಇಂಥ ಪರಿಸ್ಥಿತಿಯಲ್ಲಿ ರಜನಿಕಾಂತ್ ಅಭಿಮಾನಿಗಳು ಸಾವಿರಾರು ಲೀಟರ್ ಹಾಲನ್ನು ಕಟೌಟ್​ಗೆ ಅಭಿಷೇಕ ಮಾಡಿ ವ್ಯರ್ಥ ಮಾಡುತ್ತಿದ್ದಾರೆ. ಆದ್ದರಿಂದ ಕಟೌಟ್​ಗೆ ಹಾಲಿನ ಅಭಿಷೇಕ ಮಾಡುವುದನ್ನು ನಿಷೇಧಿಸುವಂತೆ ಮನವಿ ಮಾಡಿ ಮಣಿವಣ್ಣನ್ ಎಂಬುವರು ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾಯಾಲಯ, ಪ್ರಕರಣದ ಬಗ್ಗೆ ರಜನಿಕಾಂತ್ ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏ. 11ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ; ಜಿ ಪರಮೇಶ್ವರ ಉಪಮುಖ್ಯಮಂತ್ರಿ

Iran-US War: ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಒಬ್ಬ ಭಾರತೀಯ ಸಾವು!

DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!

200 ಕೋ ರೂ.ಸುಲಿಗೆ ಪ್ರಕರಣ: ಜಾಕ್ವೆಲಿನ್, ಸುಖೇಶ್ ವಿರುದ್ಧ ಚಾರ್ಜ್ ಶೀಟ್ ದಾಖಲು; 'ರಾರಾ ರಕ್ಕಮ್'ಗೆ ಸಂಕಷ್ಟ!

ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆ: ಬಂಡಾಯ ಶಾಸಕ ಋತಬ್ರತ ಬ್ಯಾನರ್ಜಿ TMC ಶಾಸಕಾಂಗ ಪಕ್ಷದ ನಾಯಕನಾಗಿ ನೇಮಕ!

SCROLL FOR NEXT