ಸಾಂದರ್ಭಿಕ ಚಿತ್ರ 
ರಾಜ್ಯ

ವಕ್ಫ್ ಆಸ್ತಿ ಹಗರಣದ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಿದ ಸರ್ಕಾರ

ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಸಂಬಂಧ ಉಪ ಲೋಕಾಯುಕ್ತರು ನೀಡಿದ್ದ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿರಸ್ಕರಿಸಿದೆ...

ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಸಂಬಂಧ ಉಪ ಲೋಕಾಯುಕ್ತರು ನೀಡಿದ್ದ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ. 
ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ವೇಳೆ ಅನ್ವರ್ ಮಾಣಿಪ್ಪಾಡಿ ನೀಡಿದ್ದ ವಕ್ಫ್ ಆಶ್ತಿ ಕಬಳಿಕೆ ಪ್ರಕರಣದ ವರದಿ ಪರಿಶೀಲನೆ ನಡೆಸುವಂತೆ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಶಿಫಾರಸ್ಸಿನಂತ ಉಪ ಲೋಕಾಯುಕ್ತರು ವರದಿ ಪರಿಶೀಲಿಸಿ ತನಿಖೆ ಪೂರ್ಣಗೊಳಿಸಿದ್ದರು. ಇದರ 17 ಪುಟಗಳ ವರದಿಯನ್ನು ಲೋಕಾಯುಕ್ತವು ಮಾರ್ಚ್ 28ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಲಾಗಿತ್ತು. 
ಉಪಲೋಕಾಯುಕ್ತ ಆನಂದ್ ಅವರು ನೀಡಿರುವ ವಕ್ಫ್ ಆಸ್ತಿ ಹಗರಣದಲ್ಲಿ ಅನೇಕ ಹಿರಿಯ ಕಾಂಗ್ಸೆಸ್ ನಾಯಕರು ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆಂದು ಹೆಸರಿಸಲಾಗಿದೆ. ಇವರನ್ನು ರಕ್ಷಿಸುವ ಉದ್ದೇಶದಿಂದ ಕಾಂಗ್ರೆಸ್ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!