ರಾಜ್ಯ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪ್ರಮುಖ ಕಿಂಗ್ ಪಿನ್ ಗಳ ವಶ

Sumana Upadhyaya

ಬೆಂಗಳೂರು: ಎರಡನೇ ಬಾರಿಗೆ ನಿನ್ನೆ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾ ತಂಡ ಕಿಂಗ್ ಪಿನ್ ಗಳನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದ ತಂಡ ಬೆಂಗಳೂರು, ಆನೇಕಲ್, ಚಿಕ್ಕಬಳ್ಳಾಪುರ, ತುಮಕೂರ, ಕೋಲಾರ, ಮಾಲೂರು ಸೇರಿದಂತೆ ರಾಜ್ಯದ ಹಲವೆಡೆ ತನಿಖೆಯನ್ನು ತೀವ್ರಗೊಳಿಸಿವೆ. ಹಿಂದೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದಾಗ ಬಂಧಿತರಾಗಿದ್ದವರನ್ನು ಮತ್ತೆ ಬಂಧಿಸಲಾಗಿದೆ.

ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ಹಾಗೂ ಇತರ 20 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪಿಯು ಪ್ರಶ್ನೆ ಪತ್ರಿಕೆ ವಾಟ್ಸಪ್ ಮೂಲಕ ಸೋರಿಕೆಯಾಗಿರುವುದು ಖಚಿತವಾಗಿದೆ ಎಂದು ಸಿಐಡಿ ಮೂಲಗಳು ಹೇಳಿವೆ.

ಮುಂದುವರಿದ ಪ್ರತಿಭಟನೆ: ಈ ಮಧ್ಯೆ ಪಿಯು ಕೆಮಿಸ್ಟ್ರಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಇಂದು ಕೂಡ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಿಯು ಮಂಡಳಿ ಎದುರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಎಬಿವಿಬಿ ಕೂಡಾ ಪ್ರತಿಭಟನೆ ನಡೆಸುತ್ತಿದೆ. ಪ್ರಕರಣದ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

SCROLL FOR NEXT