ಚಂದ್ರಪ್ರಭಾ ಅರಸ್ 
ರಾಜ್ಯ

ಮಾಜಿ ಸಚಿವೆ ಚಂದ್ರಪ್ರಭಾ ಅರಸ್ ನಿಧನ

ಮಾಜಿ ಸಚಿವೆ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಪುತ್ರಿ ಚಂದ್ರಪ್ರಭಾ ಅರಸು ಮಂಗಳವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೈಸೂರು: ಮಾಜಿ ಸಚಿವೆ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಪುತ್ರಿ ಚಂದ್ರಪ್ರಭಾ ಅರಸು ಮಂಗಳವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 70 ವರ್ಷದ ಚಂದ್ರಪ್ರಭಾ ಅರಸ್ ಅವರಿಗೆ ಪುತ್ರ, ಪುತ್ರಿ ಹಾಗೂ ಸೋದರಿ ಭಾರತಿ ಇದ್ದಾರೆ.

ಬೆಂಗಳೂರಿನಲ್ಲಿ ಬಿ.ಎಸ್ಸಿ ಪದವಿ ಪಡೆದ ಅವರು, 1967ರಲ್ಲಿ ಮೋಹನಚೆಲುವೆ ಅರಸು ಅವರನ್ನು  ಮದುವೆಯಾದ ಮೇಲೆ ಮೈಸೂರಿನಲ್ಲಿ ನೆಲೆಸಿದ್ದರು. ತಂದೆ ಕಟ್ಟಿದ್ದ ಕ್ರಾಂತಿರಂಗ ಪಕ್ಷದ ಮೂಲಕ ಹುಣಸೂರು ಕ್ಷೇತ್ರ ದಿಂದ 1983ರಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದರು.

1984ರಲ್ಲಿ ಕಾಂಗ್ರೆಸ್‌ ಸೇರಿದ ಅವರು 1985ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರ ದಿಂದ ಪರಾಭವಗೊಂಡರು. ಮತ್ತೆ 1989ರಲ್ಲಿ ಶಾಸಕರಾಗಿ ಚುನಾಯಿತರಾದರು. ಸಮಾಜ ಕಲ್ಯಾಣ, ಅಬಕಾರಿ ಹಾಗೂ ರೇಷ್ಮೆ ಸಚಿವೆಯಾಗಿದ್ದರು.

1991ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿ ಸಂಸತ್‌ ಪ್ರವೇಶಿಸಿದರು. 2008ರಲ್ಲಿ ಹುಣಸೂರಿಗೆ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಅವರ ಎರಡೂ ಕಾಲುಗಳಿಗೆ ತೀವ್ರ ಪೆಟ್ಟಾಗಿತ್ತು. ನಂತರ ಹೆಚ್ಚು ಓಡಾಡುತ್ತಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ