ಸಾಂದರ್ಭಿಕ ಚಿತ್ರ 
ರಾಜ್ಯ

ಮದುವೆಗೆ ವಿರೋಧ: ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಮದುವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆ ಹಾಗೂ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ...

ಮೈಸೂರು: ಮದುವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆ ಹಾಗೂ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಮೈಸೂರಿನ ಬೆಳವಾಡಿಯಲ್ಲಿ ನಡೆದಿದೆ.
ಪಲ್ಲವಿ (22) ಹಾಗೂ ತ್ಯಾಗರಾಜ (23) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳಾಗಿದ್ದು, ಬೆಳವಾಡಿಯ ಒಂದನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಮೃತ ಪಲ್ಲವಿಗೆ ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು, ಕೌಟುಂಬಿಕ ಕಲಹದಿಂದ ಪತಿ ಮುಂಬೈನಲ್ಲಿ ನಲೆಸಿದ್ದಾರೆ. ಇತ್ತ ಜೀವನೋಪಯೋಗಕ್ಕಾಗಿ ಮೈಸೂರಿನ ಕಾರ್ಖಾನೆಯೊಂದಕ್ಕೆ ಕೆಲಸಕ್ಕೆ ಸೇರಿಕೊಂಡ ಮಹಿಳೆಗೆ ತ್ಯಾಗರಾಜ ಎಂಬ ಯುವಕನ ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು.
ಇತ್ತೀಚೆಗೆ ಬೆಳವಾಡಿಯಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದು ಒಟ್ಟಿಗೆ ವಾಸವಾಗಿದ್ದ ಪ್ರೇಮಿಗಳು ಮದುವೆಯಾಗಲು ಇಬ್ಬರ ಮನೆಯಲ್ಲೂ ವಿರೋಧವಿತ್ತು. ಹೀಗಾಗಿ ಮನನೊಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ