ಬೆಂಗಳೂರು: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾವೊಂದರ ಮೇಲೆ ಶುಕ್ರವಾರ ದಾಳಿ ನಡೆಸಿದ ಪೊಲಿಸರು, ಆರು ಮಂದಿಯನ್ನು ಬಂಧಿಸಿದ್ದಾರೆ.
ಎಚ್ ಎಸ್ ಆರ್ ಲೇಔಟ್ ನಲ್ಲಿರುವ ಪಿಕ್ಸೆಲ್ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು, ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಂಜುನಾಥ್, ರಾಜು, ವಂಶಿ, ರಾಜು, ನಜೀಮ್ ಹಾಗೂ ಜುಮ್ಮಿ ಎಂಬುವವರನ್ನು ಬಂಧಿಸಿದ್ದಾರೆ.
ಪಿಕ್ಸೆಲ್ ಸ್ಪಾ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲಿಸರು, ದಾಳಿ ನಡೆಸಿ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿ ಒಟ್ಟು ಆರು ಜನರನ್ನ ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.