ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಫೋಟಗೊಂಡಿದೆ.
ಸ್ಫೋಟದ ತೀವ್ರತೆಗೆ ನೀರಿನ ಟ್ಯಾಂಕ್ ಮತ್ತು ಯಂತ್ರ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮೂರು ದಿನಗಳ ಹಿಂದೆಯಷ್ಟೇ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಲಾಗಿತ್ತು.
ಕಳಪೆ ಕಾಮಗಾರಿಯಿಂದ ಘಟಕ ಸ್ಫೋಟಗೊಂಡಿದೆ ಎಂದು ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.