ಸಾಂದರ್ಭಿಕ ಚಿತ್ರ 
ರಾಜ್ಯ

ಡ್ರೈವರ್ ನ ಕಾರ್ ವೀಲಿಂಗ್ ಕ್ರೇಜ್ ಗೆ ಬಲಿಯಾದಳು ಯುವತಿ

ಡ್ರೈವರ್ ನ ವೀಲಿಂಗ್ ಕ್ರೇಜ್​ನಿಂದಾಗಿ ಕಾರು ಹಾಗೂ ಬಸ್ಸು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದ 25ರ ಹರೆಯದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿರುವ ...

ಮಡಿಕೇರಿ: ಡ್ರೈವರ್ ನ ವೀಲಿಂಗ್ ಕ್ರೇಜ್​ನಿಂದಾಗಿ ಕಾರು ಹಾಗೂ ಬಸ್ಸು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದ 25ರ ಹರೆಯದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೈಸೂರು- ಮಡಿಕೇರಿ ರಾಜ್ಯ ಹೆದ್ದಾರಿಯ ಕೆದಕಲ್ ತಿರುವಿನಲ್ಲಿ ಸೋಮವಾರ ಕೆಎಸ್​ಆರ್​ಟಿಸಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೈಸೂರಿನ ರಾಜೇಂದ್ರನಗರದ ಕೇಸರಿ ನಿವಾಸಿ ಚೈತ್ರಾ (25) ಸಾವನ್ನಪ್ಪಿದ್ದಾಳೆ.

ಗಂಭೀರವಾಗಿ ಗಾಯ ಗೊಂಡ ಮೈಸೂರಿನ ಸದನ್ ಎಂಬಾತನನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಒಯ್ಯಲಾಯಿತು. ಮೈಸೂರಿನ ನಂದಿನಿ, ರೇಣುಕಾ, ವಿನಯ್ ಹಾಗೂ ಮಿಥುನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಕಾರು ಚಾಲಕನ ಬೇಜವಾಬ್ದಾರಿಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT