ನಾಪತ್ತೆಯಾದ ಬಾಲಕ ಆಫ್ತಾಬ್ ನಜೀರ್ 
ರಾಜ್ಯ

ಹಾಡಹಗಲೇ ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ನಾಪತ್ತೆ

ಮನೆ ಮುಂದೆ ಆಟವಾಡುತ್ತಿದ್ದ 18 ತಿಂಗಳ ಗಂಡು ಮಗುವೊಂದು ಹಾಡಹಗಲೇ ನಾಪತ್ತೆಯಾದ ಪ್ರಕರಣ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ:  ಮನೆ ಮುಂದೆ ಆಟವಾಡುತ್ತಿದ್ದ 18 ತಿಂಗಳ ಗಂಡು ಮಗುವೊಂದು ಹಾಡಹಗಲೇ ನಾಪತ್ತೆಯಾದ ಪ್ರಕರಣ  ಬೆಳಕಿಗೆ ಬಂದಿದೆ. ಹಳೇ ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದ್ದು ಮಂಗಳವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಪಹೃತ ಬಾಲಕನನ್ನು ನೂರಾನಿ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದ ನಜೀರ್ ಸಾಬ್ - ಸಲ್ಮಾ ಬಾನು ಅವರ ಒಂದುವರೆ ವರ್ಷದ ಮಗ ಆಫ್ತಾಬ್ ನಜೀರ್ ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಲ್ಮಾ ಮನೆ ಮುಂದೆ ಮಗನಿಗೆ ಊಟ ಮಾಡಿಸುತ್ತಿದ್ದಳು. ಕುಡಿಯಲು ನೀರು ತರಲು ಮಗನನ್ನು ಮನೆ ಮುಂದೆ ಬಿಟ್ಟು ಒಳಗೆ ಹೋಗಿ ಬರುವಷ್ಟರಲ್ಲಿ ಆತ ನಾಪತ್ತೆಯಾಗಿದ್ದಾನೆ. ಮಗನಿಗಾಗಿ ಬೀದಿಯಲ್ಲೆಲ್ಲ ಹುಡುಕಾಡಿದ ದಂಪತಿ ಈಗ ಮಗನ ಅಪಹರಣವಾಗಿ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಮೊದಲಿಗೆ ಪೊಲೀಸರು ಬಾಲಕ ನಾಪತ್ತೆಯಾಗಿದ್ದಾನೆಂದು ಭಾವಿಸಿ ಹುಡುಕಾಡಿದ್ದರು. ಆದರೆ ಮಗು ಸಿಗದಿರುವ ಹಿನ್ನೆಲೆಯಲ್ಲಿ, ಕಳ್ಳತನವಾಗಿರಬಹುದೆಂದು ಶಂಕಿಸಿದ್ದಾರೆ. ಇನ್ನೂ ಯಾರಾದರೂ ಕಿಡ್ನಾಪ್ ಮಾಡಿರುವ ಸಾಧ್ಯತೆ ಕಡಿಮೆ, ಯಾಕೆಂದರೇ ಬಾಲಕನ ಪೋಷಕರು ಬಡತನ ಹಿನ್ನೆಲೆ ಹೊಂದಿರುವವರು ಎಂದು ಪೊಲೀಸರು ಹೇಳಿದ್ದಾರೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video