ಮಹಿಳಾ ರೌಡಿ ಶೀಟರ್ ಯಶಸ್ವಿನಿ (ಸಂಗ್ರಹ ಚಿತ್ರ) 
ರಾಜ್ಯ

ಮೀಟರ್ ಬಡ್ಡಿ ದಂಧೆ: ಮಹಿಳಾ ರೌಡಿ ಶೀಟರ್ ಯಶಸ್ವಿನಿ ಆಸ್ಪತ್ರೆಯಿಂದ ಪರಾರಿ

ಮೀಟರ್ ಬಡ್ಡಿ ದಂಧೆ ಕುಖ್ಯಾತಿಯ ಮಹಿಳಾ ರೌಡಿ ಶೀಟರ್ ಯಶಸ್ವಿನಿ ಪೊಲೀಸ್ ಸರ್ಪಗಾವಲಿನ ನಡುವೆಯೇ ಆಸ್ಪತ್ರೆಯಿಂದ ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ...

ಬೆಂಗಳೂರು: ಮೀಟರ್ ಬಡ್ಡಿ ದಂಧೆ ಕುಖ್ಯಾತಿಯ ಮಹಿಳಾ ರೌಡಿ ಶೀಟರ್ ಯಶಸ್ವಿನಿ ಪೊಲೀಸ್ ಸರ್ಪಗಾವಲಿನ ನಡುವೆಯೇ ಆಸ್ಪತ್ರೆಯಿಂದ ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಡ್ಡಿ ಹಣ ನೀಡದ ಮಹಿಳೆಯರಿಗೆ ಮನಸೋ ಇಚ್ಛೆ ಥಳಿಸಿದ್ದ ಯಶಸ್ವಿನಿಯನ್ನು ಬಂಧಿಸಲು ಪೊಲೀಸರು ತೆರಳಿದ್ದ ವೇಳೆ ಎದೆನೋವಿನ  ನಾಟಕವಾಡಿ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಇಂದು ಪೊಲೀಸ್ ಕಾವಲಿನ ನಡುವೆಯೇ ಯಶಸ್ವಿನಿ ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯಿಂದ ಯಶಸ್ವಿನಿ ಪರಾರಿಯಾಗಿದ್ದು, ಆಕೆಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆಸ್ಪತ್ರೆಯ ಕೊಠಡಿಯಲ್ಲಿ ತಾನು ಉಟ್ಟಿದ್ದ  ಸೀರೆಯನ್ನು ಬಚ್ಚಿಟ್ಟು, ಯಾರಿಗೂ ಅನುಮಾನ ಬಾರದಿರಲಿ ಎಂದು ಬೇರೆ ಉಡುಗೆಯಲ್ಲಿ ಪರಾರಿಯಾಗಿದ್ದಾಳೆ. ಸಿನಿಮೀಯ ರೀತಿಯಲ್ಲಿ ರೌಡಿಶೀಟರ್ ಯಶಸ್ವಿನಿ ಆಸ್ಪತ್ರೆಯಿಂದ  ಪರಾರಿಯಾಗಿದ್ದು,  ಯಶಸ್ವಿನಿ ದಾಖಲಾಗಿದ್ದ ಆಸ್ಪತ್ರೆ ಕೊಠಡಿಯ ಕಿಟಕಿ ಸರಳುಗಳನ್ನು ಮುರಿದು ಅಲ್ಲಿಂದ ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಪೊಲೀಸರು ನೀಡಿರುವ ಮಾಹಿತಿಯಂತೆ ನಿನ್ನೆ ರಾತ್ರಿ ಆಸ್ಪತ್ರೆಗೆ ಸಂಬಂಧಿಕರನ್ನು ಕರೆಸಿಕೊಂಡ ಯಶಸ್ವಿನಿ, ಅವರಿಂದ ಬಟ್ಟೆ ಪಡೆದು ತಾನು ಉಟ್ಟಿದ್ದ ಸೀರೆಯನ್ನು ಕೊಠಡಿಯಲ್ಲೇ ಬಚ್ಚಿಟ್ಟಿದ್ದಾಳೆ.  ಬಳಿಕ ಮಧ್ಯರಾತ್ರಿ ವೇಳೆ ಕಿಟಕಿಯ ಸರಳುಗಳನ್ನು ಮುರಿದು ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಯಶಸ್ವಿನಿ ಬಂಧನಕ್ಕಾಗಿ 2 ವಿಶೇಷ ತಂಡ ರಚನೆ
ಇನ್ನು ಆಸ್ಪತ್ರೆಯಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ಆಸ್ಪತ್ರೆಯಿಂದ ಪರಾರಿಯಾಗಿರುವ ರೌಡಿ ಶೀಟರ್ ಯಶಸ್ವಿನಿ ಬಂಧನಕ್ಕಾಗಿ 2 ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಆಕೆಯ  ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!