ಸಾಂದರ್ಭಿಕ ಚಿತ್ರ 
ರಾಜ್ಯ

ಒವೈಸಿ ಕಾಲಿಗೆ ಬೀಳುವ ನಕಲಿ ಫೋಟೋ ಅಪ್ ಲೋಡ್ ಮಾಡಿದ ಯುವಕ ಸೆರೆ

ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೋಟೋ ಹಾಕುವುದು ಸಾಮಾನ್ಯವಾಗಿಬಿಟ್ಟಿದೆ. ಕೊಪ್ಪಳದ ಗಂಗಾವತಿಯ...

ಕೊಪ್ಪಳ: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೋಟೋ ಹಾಕುವುದು ಸಾಮಾನ್ಯವಾಗಿಬಿಟ್ಟಿದೆ. ಕೊಪ್ಪಳದ ಗಂಗಾವತಿಯ ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರು ಆಲ್‌ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಸಂಸದ ಅಸಾದುದ್ದೀನ್ ಒವೈಸಿ ಕಾಲಿಗೆ ಬಿದ್ದು ನಮಸ್ಕರಿಸುತ್ತಿರುವ ಚಿತ್ರವನ್ನು ತಯಾರಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದಾನೆ. ನಂತರ  ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಕೊಪ್ಪಳ ಮೂಲದ ಎಐಎಂಐಎಂ ಪಕ್ಷದ ಕಾರ್ಯಕರ್ತ ಮಹಮ್ಮದ್ ಮೆಹಬೂಬ್ ಎಂಬ ಯುವಕ ತನ್ನ ಫೇಸ್ ಬುಕ್  ಪುಟದಲ್ಲಿ ಮೋದಿ ಅವರು ಒವೈಸಿ ಕಾಲಿಗೆ ನಮಸ್ಕರಿಸುತ್ತಿರುವ ಚಿತ್ರವನ್ನು ಅಪ್ ಲೋಡ್ ಮಾಡಿದ್ದ.

ಚಿತ್ರ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ, ಬಿಜೆಪಿ ಕಾರ್ಯಕರ್ತರು ಮಹಮ್ಮದ್ ವಿರುದ್ಧ ದೂರು ನೀಡಿದ್ದರು. ದೂರಿನ ಪ್ರಕಾರ, ಗಂಗಾವತಿಯ ಪಟ್ಟಣ ಪೊಲೀಸರು ಮಹಮ್ಮದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT