ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ರಹೀಲ್ ಖಾನ್ (24) ಮತ್ತು ಮನ್ಸೂರ್(58) ಮೃತಪಟ್ಟ ದುರ್ದೈವಿಗಳು. ಮನ್ಸೂರ್ ಕಾನ್ ರಾಹಿಲ್ ಖಾನ್ ರ ಚಿಕ್ಕಪ್ಪ. ಹಾಸನದಲ್ಲಿರುವ ಸರ್ಕಾರಿ ಕಚೇರಿಯಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ರಾಹಿಲ್ ಹಾಸನದಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮನೆಗೆ ಬಂದಿದ್ದ ಇವರು ಮತ್ತೆ ಹಾಸನಕ್ಕೆ ವಾಪಸ್ಸಾಗುತ್ತಿರಬೇಕಾದರೆ ರಾಷ್ಟ್ರೀಯ ಹೆದ್ದಾರಿ 48ರ ಮಹದೇವಪುರ ಬಳಿ ಕಾರು ನಿಂತ್ರಣ ತಪ್ಪಿ ಉರುಳಿ ಬಿದ್ದಿದೆ. ರಾಹಿಲ್ ಕಾರು ಚಲಾಯಿಸುತ್ತಿದ್ದನು ಎಂದು ತನಿಖೆಯಿಂದ ತಿಳಿದು ಬಂದಿದೆ. ಇನ್ನು ಘಟನೆಯಲ್ಲಿ ಮನ್ಸೂರ್ ಪತ್ನಿ ಶಬೀರ ಬಾನು ಮತ್ತು ಅವರ ಪುತ್ರ ಮೊಹಸೀನ್ ತಹಿರ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.