ಬೆಂಗಳೂರು: ಬೆಂಗಳೂರಿನ ಫ್ರೇಜರ್ ಟೌನ್ ನ ಪ್ರಸಿದ್ಧ ಫಾಸ್ಟ್ ಪುಡ್ ವೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಅನಿಲ ಸೋರಿಕೆಯಿಂದಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು. ಅಂಗಡಿ ಮುಂದೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಕೋಲ್ಸ್ ರೋಡ್ ಜಂಕ್ಷನ್ ನಲ್ಲಿರು 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿರುವ ಖಾನ್ ಸಾಹೇಬ್ ರೋಲ್ಸ್ ಫುಡ್ ಜಾಯಿಂಟ್ ನಲ್ಲಿ ಮಂಗಳವಾರ ಬೆಳಗ್ಗೆ 7.45 ರ ವೇಳೆಗೆ ಸ್ಪೋಟ ಸಂಭವಿಸಿದೆ. ಅಂಗಡಿ ಒಳಗಿದ್ದ ಎಲ್ಲಾ ಸಾಮಾನು ಸರಂಜಾಮು ಭಸ್ಮವಾಗಿವೆ.
ತಕ್ಷಣವೇ ಘಟನಾ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಫಾಸ್ಟ್ ಫುಡ್ ಅಂಗಡಿಯಲ್ಲಿ ನಾಲ್ಕು ಸಿಲಿಂಡರ್ ಗಳಿದ್ದವು. ರಾತ್ರಿ ಅಂಗಡಿ ಮುಚ್ಚಿದ ನಂತರ ಒಂದು ಸಿಲಿಂಡರ್ ನಲ್ಲಿ ಅನಿಲ ಸೋರಿಕೆಯಾಗಿದೆ. ಬೆಳಗ್ಗೆ ಬಂದು ಅಂಗಡಿ ತೆರೆದಾಗ ಸ್ಫೋಟ ಸಂಭವಿಸಿದೆ. ಕಟ್ಟಡದ ಮಾಲೀಕರ ಮಗಳು ನಾಯಿಯೊಂದಿಗೆ ವಾಯು ವಿಹಾರಕ್ಕೆ ತೆರಳುತ್ತಿದ್ದಳು. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆಕೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಮತ್ತೊಬ್ಬ ಆಟೋ ರಿಕ್ಷಾ ಚಾಲಕನೂ ಕೂಡ ಗಾಯಗೊಂಡಿದ್ದಾನೆ. ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.