ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರಿನಲ್ಲಿ ಶವಸಂಸ್ಕಾರದ ವೇಳೆ ಕಣ್ಣು ಬಿಟ್ಟ ಮೃತ ಮಹಿಳೆ!

ಕಳೆದ ಮೇ 15ರಂದು ಮೃತಪಟ್ಟಿದ್ದ ಮಹಿಳೆಯೊಬ್ಬರು ಶವಸಂಸ್ಕಾರ ನಡೆಸುತ್ತಿದ್ದ ವೇಳೆಯೇ ಕಣ್ಣು ತೆರೆದ ಅಚ್ಚರಿಯ ಘಟನೆ ಮೈಸೂರು...

ಮೈಸೂರು: ಕಳೆದ ಮೇ 15ರಂದು ಮೃತಪಟ್ಟಿದ್ದ ಮಹಿಳೆಯೊಬ್ಬರು ಶವಸಂಸ್ಕಾರ ನಡೆಸುತ್ತಿದ್ದ ವೇಳೆಯೇ ಕಣ್ಣು ತೆರೆದ ಅಚ್ಚರಿಯ ಘಟನೆ ಮೈಸೂರು ನಗರದ ಅಗ್ರಹಾರದಲ್ಲಿ ನಡೆದಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮೈಸೂರಿನ ಆಭರಣ ವ್ಯಾಪಾರಿ ಮಹೇಂದ್ರ ಕುಮಾರ್ ಅವರ ಪತ್ನಿ ಪದ್ಮಾ ಲೋಡಾ ಎಂಬ ಮಹಿಳೆಯನ್ನು ಮೇ 16ರಂದು ನಾರಾಯಣಶಾಸ್ತಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಮಹಿಳೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದರು. 
ನಂತರ ಕುಟುಂಬದ ಒಪ್ಪಿಗೆ ಮೇರೆಗೆ ವೈದ್ಯರು 59 ವರ್ಷದ ಮಹಿಳೆಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ವೈದ್ಯರ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡ ಪದ್ಮಾ ಮನೆಯವರು ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು.
ಮಂಗಳವಾರ ಪದ್ಮಾ ಲೋಡಾ ಅವರ ಶವಸಂಸ್ಕಾರ ನಡೆಸುತ್ತಿದ್ದ ವೇಳೆ ಕಣ್ಣು ಬಿಟ್ಟಿರುವ ಅಚ್ಚರಿಯ ಘಟನೆ ನಡೆದಿದೆ. ಮರು ಜೀವ ಪಡೆದ ಪದ್ಮಾರನ್ನು ಕೂಡಲೇ ಮತ್ತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖಾಸಗಿ ವಾಹಿನಿ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT