ವೆಂಕಯ್ಯ ನಾಯ್ಡು 
ರಾಜ್ಯ

ವೆಂಕಯ್ಯ ನಾಯ್ಡುರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸುವುದು ಬೇಡ..ಟ್ವಿಟ್ಟರ್ ನಲ್ಲಿ ಅಭಿಯಾನ

ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ, ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಅವರನ್ನು...

ಬೆಂಗಳೂರು: ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ, ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಅವರನ್ನು ಮತ್ತೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಬಾರದೆಂದು ಟ್ವೀಟರ್ ನಲ್ಲಿ  #VenkayyaSakayya ಅಭಿಯಾನ ಆರಂಭವಾಗಿದೆ. ಇದಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ಸೂಚಿಸುತ್ತಿದ್ದಾರೆ.

ವೆಂಕಯ್ಯ ನಾಯ್ಡು ಅವರು ಬಿಜೆಪಿಯಿಂದ ಸತತವಾಗಿ ರಾಜ್ಯಸಭೆಗೆ ಆಯ್ಕೆಯಾಗುತ್ತಿದ್ದಾರೆ. 18ವರ್ಷ ಅವಧಿ ಪೂರೈಸುತ್ತಿರುವ ವೆಂಕಯ್ಯ ನಾಯ್ಡು ಅವರ ರಾಜ್ಯಸಭಾ ಸದಸ್ಯತ್ವ ಜೂನ್ ತಿಂಗಳಿಗೆ ಮುಕ್ತಾಯವಾಗಲಿದೆ. ಆ ನಿಟ್ಟಿನಲ್ಲಿ ನಾಯ್ಡು ಅವರನ್ನು ಮತ್ತೆ ಕರ್ನಾಟಕದಿಂದ ಆಯ್ಕೆ ಮಾಡಬಾರದು ಎಂದು ಟ್ವೀಟರ್ ನಲ್ಲಿ ಅಭಿಯಾನ ಆರಂಭವಾಗಿದೆ.

ಹೊರ ರಾಜ್ಯದ ವೆಂಕಯ್ಯ ನಾಯ್ಡುಗೆ ಕರ್ನಾಟಕದಿಂದ ರಾಜ್ಯಸಭಾ ಸೀಟು ಯಾಕೆ ಎಂಬ ಐಟಿ ಕನ್ನಡ ಬಳಗದ ಪ್ರಶ್ನೆಗೆ ವ್ಯಾಪಕ ಬೆಂಬಲ ಸಿಗತೊಡಗಿದೆ. ಇಷ್ಟು ವರ್ಷಗಳಿಂದ ಕರ್ನಾಟಕದಿಂದ ಅವರು ರಾಜ್ಯಸಭೆಗೆ ಆಯ್ಕೆಯಾಗಿ ಹೋದರೂ ಕೂಡ ಕನ್ನಡ ಕಲಿತಿಲ್ಲ. ಕನ್ನಡ ಜನತೆಗಾಗಿ ಅವರು ಏನೂ ಕೆಲಸ ಮಾಡಿಲ್ಲ ಎಂಬ ಆಕ್ರೋಶ ಕನ್ನಡಿಗರದ್ದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ