ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಸಿಎಂ ಪರಿಹಾರ ನಿಧಿ ಹಗರಣ; ನಿಧಿ ದುರ್ಬಳಕೆ ಮಾಡಿದ್ದರಲ್ಲಿ ಕಲ್ಬುರ್ಗಿ ಜಿಲ್ಲೆಯದ್ದೇ ಮೇಲುಗೈ

ಕಳೆದ ವರ್ಷ ಬೆಳಕಿಗೆ ಬಂದ ಮುಖ್ಯಮಂತ್ರಿ ಪರಿಹಾರ ನಿಧಿ ದುರ್ಬಳಕೆ ಪ್ರಕರಣದಲ್ಲಿ ರು.100 ಕೋಟಿ ಹಗಣರವಾಗಿದ್ದು, ಇದರಲ್ಲಿ...

ಬೆಂಗಳೂರು: ಕಳೆದ ವರ್ಷ ಬೆಳಕಿಗೆ ಬಂದ ಮುಖ್ಯಮಂತ್ರಿ ಪರಿಹಾರ ನಿಧಿ ದುರ್ಬಳಕೆ ಪ್ರಕರಣದಲ್ಲಿ ರು.100 ಕೋಟಿ ಹಗಣರವಾಗಿದ್ದು, ಇದರಲ್ಲಿ ಕಲಬುರ್ಗಿ ಜಿಲ್ಲೆಯದ್ದೇ ಮೇಲುಗೈ.
ಮುಖ್ಯಮಂತ್ರಿ ಪರಿಹಾರ ನಿಧಿ ಹಗರಣ ಕುರಿತು ಸಿಐಡಿ ತನಿಖೆ ನಡೆಸುತ್ತಿದ್ದು, ಪ್ರಾಥಮಿಕ ತನಿಖೆಯಲ್ಲಿ 100 ಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ, ಕಲಬುರ್ಗಿ ಜಿಲ್ಲೆ ಹೆಚ್ಚು ಹಗರಣ ನಡೆದಿದೆ ಎಂದು ಸಿಐಡಿ ಹೇಳಿದೆ. 
2015ರಲ್ಲಿ ಸುಮಾರು ರು.48 ಕೋಟಿ ಹಣವನ್ನು ಕಲಬುರ್ಗಿ ಜಿಲ್ಲೆಯಲ್ಲಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸಿಎಂ ಪರಿಹಾರ ನಿಧಿಯಿಂದ ಈ ಜಿಲ್ಲೆಗೆ ಶೇ.10ರಷ್ಟು ಹಣವನ್ನು ಬಿಡುಗಡೆ ಮಾಡಲಾಗಿತ್ತು. 
ನಕಲಿ ವೈದ್ಯಕೀಯ ಪ್ರಮಾಣಪತ್ರಗಳನ್ನು ಸಲ್ಲಿಸಿ ಸಿಎಂ ಪರಿಹಾರ ನಿಧಿಯಿಂದ ಹಣವನ್ನು ಪಡೆಯುತ್ತಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣ ಬಿಡುಗಡೆಯನ್ನು ಸ್ಥಗಿತಗೊಳಿಸಲಾಯಿತು. ಜೇವರ್ಗಿ ಮತ್ತು ಸೊಲ್ಲಾಪುರದಲ್ಲಿರುವ ಆಸ್ಪತ್ರೆಗಳಿಂದ ನಕಲಿ ಪ್ರಮಾಣಪತ್ರಗಳನ್ನು ನೀಡಲಾಗುತ್ತಿತ್ತು ಎಂದು ಸಿಐಡಿ ತನಿಖಾ ವರದಿ ಹೇಳಿದೆ. 
ಸಿಎಂ ಪರಿಹಾರ ನಿಧಿಯಡಿ ಕ್ಯಾನ್ಸರ್, ಹೃದಯರೋಗ, ಅಪಘಾತ ಸೇರಿದಂತೆ ಇತರೆಗಳಿಗಾಗಿ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಪ್ರತಿ ಫಲಾನುಭವಿ ರು.3 ಲಕ್ಷ ಪರಿಹಾರವನ್ನು ಪಡೆಯುತ್ತಿದ್ದರು. ಈ ಯೋಜನೆಯಡಿ 100 ಕೋಟಿಗೂ ಹೆಚ್ಚು ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಸಿಐಡಿ ಹೇಳಿದೆ. 
ಸಚಿವರಿಗೆ ನೋಟೀಸ್ ಜಾರಿ ಸಾಧ್ಯತೆ
ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆಗಾಗಿ ಶಿಫಾರಸು ಮಾಡಿರುವ ಹಲವಾರು ಸಚಿವರಿಗೆ ಸಿಐಡಿ ನೋಟೀಸ್ ನೀಡಲು ನಿರ್ಧರಿಸಿದೆ. ಇಂಧನ ಸಚಿವ ಡಿ ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ನಗರಾಭಿವೃದ್ಧಿ ಸಚಿವ ಕೆ ಜೆ ಜಾರ್ಜ್, ಎಚ್ ಸಿ ಮಹದೇವಪ್ಪ, ಶಾಸಕರು ಮತ್ತು ಎಂಎಲ್ ಸಿಗಳಿಗೆ ನೋಟೀಸ್ ಜಾರಿ ಮಾಡಲು ಸಿಐಡಿ ನಿರ್ಧರಿಸಿದೆ.
ಏನಿದು ಪ್ರಕರಣ?: 
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಡವರ ವೈದ್ಯಕೀಯ ವೆಚ್ಚಗಳಿಗೆ ಆರ್ಥಿಕ ನೆರವು ಕಲ್ಪಿಸಲಾಗುತ್ತದೆ. ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡ ಕೆಲವರು, ವೈದ್ಯಕೀಯ ವೆಚ್ಚದ ಸಂಬಂಧ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ಪಡೆದಿದ್ದರು. 2015ರ ಅಕ್ಟೋಬರ್‌ನಲ್ಲಿ ವೈದ್ಯಕೀಯ ನೆರವು ಕೋರಿ ಸಲ್ಲಿಕೆಯಾಗಿದ್ದ ಕೆಲವರ ದಾಖಲೆಗಳನ್ನು ಪರಿಶೀಲಿಸಿದಾಗ ಅವು ನಕಲಿಯಾಗಿವೆ ಎಂಬ ಬಗ್ಗೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳಿಗೆ ಅನುಮಾನ ಮೂಡಿತ್ತು. ಈ ಹಿನ್ನೆಲೆಯಲ್ಲಿ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿದಾಗ ಅವು ನಕಲಿ ದಾಖಲೆಗಳು ಎಂಬುದು ಸ್ಪಷ್ಟವಾಯಿತು. ಕೂಡಲೇ ಮುಖ್ಯಮಂತ್ರಿ ಕಾರ್ಯಾಲಯದ ಪರಿಹಾರ ನಿಧಿ ವಿಭಾಗದ ಕಾರ್ಯದರ್ಶಿ ಸೋಮಶೇಖರ್‌ ಅವರು ಈ ಕುರಿತು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. 

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ನಕಲಿ ದಾಖಲೆಗಳ ಹೆಸರಿನಲ್ಲಿದ್ದ ಫ‌ಲಾನುಭವಿಗಳನ್ನು ಪತ್ತೆ ಹಚ್ಚಿದಾಗ ಬಹುಪಾಲು ಮಂದಿ ಬೇರೆಯವರ ಹೆಸರಿನಲ್ಲೇ ದಾಖಲೆಗಳನ್ನು ಸೃಷ್ಟಿಸಿದ್ದ ಸಂಗತಿ ಬಯಲಾಗಿತ್ತು. ಅಲ್ಲದೆ, ಈ ವಂಚನೆಗೆ ಸಂಬಂಧಿಸಿದಂತೆ ಖಾಸಗಿ ಕಂಪನಿ ನೌಕರ ಸೇರಿದಂತೆ ಏಳು ಜನರನ್ನು ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT