ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆ(ಎನ್ಎಚ್ಎಂ)ಯ ಅನುದಾನದಡಿ ಔಷಧ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವನ್ನು ತಳ್ಳಿ ಹಾಕಿರುವ ಆರೋಗ್ಯ ಸಚಿವ ಯು ಟಿ ಖಾದರ್, ಈ ಸಂಬಂಧ ವಾರದೊಳಗೆ ಶ್ವೇತ ಪತ್ರ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಶನಿವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್ ಎಚ್ ಎಂ ಯೋಜನೆಯಡಿ ಔಷಧ ಖರೀದಿಗಾಗಿ ರು.1463.41 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿತ್ತು ಎಂಬ ಮಾತು ಸುಳ್ಳು. ಔಷಧದ ಖರೀದಿಗಾಗಿ ರು.17.7 ಕೋಟಿ ಮಾತ್ರ ಬಿಡುಗಡೆಯಾಗಿದೆ.
ಹಾಗಾಗಿ, ಔಷಧ ಖರೀದಿಯಲ್ಲಿ ನಡೆದಿರುವ ಅವ್ಯವಹಾರದ ಕುರಿತು ಬಿಜೆಪಿಯ ಮಾಜಿ ಪಾಲಿಕೆ ಸದಸ್ಯ ಎನ್ ಆರ್ ರಮೇಶ್ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಅವರು ಹೇಳಿದ್ದಾರೆ.
ಈ ಕುರಿತು ಪ್ರತ್ಯೇಕ ಸಂಸ್ಥೆಯಿಂದ ತನಿಖೆ ನೆಡಸಲಾಗುವುದು. ಈ ಹಣ ಬಳಕೆಯ ಕುರಿತು ಒಂದು ವಾರದೊಳಗಾಗಿ ಶ್ವೇತ ಪತ್ರ ಹೊರಡಿಸಲಾಗುವುದು ಎಂದು ಖಾದರ್ ಸ್ಪಷ್ಟನೇ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics