ಸಾಂದರ್ಭಿಕ ಚಿತ್ರ 
ರಾಜ್ಯ

ಹೊಸದಾಗಿ ಜಾತಿಗಣತಿ ಮಾಡುವಂತೆ ಒಕ್ಕಲಿಗ, ಲಿಂಗಾಯತ ಸಮುದಾಯ ಆಗ್ರಹ

ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಇದರ ಬೆನ್ನಲ್ಲೇ ತೀವ್ರ ವಿರೋಧ ವ್ಯಕ್ತಪಡಿಸಿರುವ ಲಿಂಗಾಯತ ಹಾಗೂ ..

ಬೆಂಗಳೂರು : ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಇದರ ಬೆನ್ನಲ್ಲೇ ತೀವ್ರ ವಿರೋಧ ವ್ಯಕ್ತಪಡಿಸಿರುವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು  ಹೊಸದಾಗಿ ಜಾತಿ ಗಣತಿ ಮಾಡುವಂತೆ ಆಗ್ರಹಿಸಿದ್ದಾರೆ.

ಬಳ್ಳಾರಿ ರಸ್ತೆಯಲ್ಲಿರುವ ವೀರಶೈವ-ಲಿಂಗಾಯತ ಭವನದಲ್ಲಿಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ಮುಖಂಡರು 'ಜಾತಿ ಜನಗಣತಿ ವರದಿ ಪ್ರಕಟಣೆಗೆ ಪೂರ್ವಭಾವಿ ಸಭೆ' ನಡೆಸಿದರು.

ವೀರಶೈವ ಮಹಾಸಭಾದ ಅಧ್ಯಕ್ಷ ಎನ್‌.ತಿಪ್ಪಣ್ಣ ಮಾತನಾಡಿ ''ಎರಡು ಸಮುದಾಯಗಳಿಗೆ ಇರುವ ಮೀಸಲನ್ನು ಕಿತ್ತುಕೊಂಡು ಬೇರೆ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಬೇಕು ಎನ್ನುವ ಉದ್ದೇಶದಿಂದ ಲಿಂಗಾಯತ ಹಾಗೂ ಒಕ್ಕಲಿಗರ ಸಂಖ್ಯೆಯನ್ನು ರಾಜ್ಯ ಸರ್ಕಾರ ಕಡಿಮೆ ಮಾಡಿ ವರದಿ ಸಿದ್ಧಪಡಿಸಿದೆ. ಈಗಾಗಲೇ ಮಾಧ್ಯಮಗಳಿಗೆ ಸೋರಿಕೆಯಾಗಿರುವ ವರದಿ ಅಧಿಕೃತ ಆಗಿದ್ದಲ್ಲಿ ಅದಕ್ಕೆ ಎರಡು ಸಮುದಾಯಗಳ ತೀವ್ರ ವಿರೋಧವಿದೆ. ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ. ಅದನ್ನು ಬಿಡುಗಡೆ ಮಾಡಬಾರದು. ರಾಜ್ಯದಲ್ಲಿ 1.59 ಕೋಟಿ ಲಿಂಗಾಯತರು ಹಾಗೂ 1.9 ಕೋಟಿ ಒಕ್ಕಲಿಗರಿದ್ದಾರೆ. ಆದರೆ, ರಾಜ್ಯ ಸರಕಾರ ಈ ಎರಡು ಸಮುದಾಯಗಳ ಜನಸಂಖ್ಯೆಯನ್ನು 1 ಕೋಟಿ ಒಳಗೆ ಇಳಿಸಿದೆ,'' ಎಂದು ಆರೋಪಿಸಿದರು.

ಸೋರಿಕೆಯಾಗಿರುವ ರಾಜ್ಯ ಸರಕಾರದ ಜಾತಿ ಗಣತಿ ವರದಿಯಲ್ಲಿನ ಲೆಕ್ಕಾಚಾರ ಅವೈಜ್ಞಾನಿಕ ಹಾಗೂ ದುರುದ್ದೇಶಪೂರ್ವಕವಾಗಿದೆ. ರಾಜಕೀಯ ಲಾಭದ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಸರಕಾರವೂ ಸಮುದಾಯಗಳ ಜನಸಂಖ್ಯೆಯನ್ನು 1 ಕೋಟಿಗಿಂತಲೂ ಕಡಿಮೆ ಮಾಡಿದೆ. ಗಣತಿ ವೇಳೆ ಎರಡ್ಮೂರು ಜಾತಿಗಳನ್ನು ಮಾತ್ರ ಪರಿಗಣಿಸಿ ಉಳಿದ ಉಪಜಾತಿಗಳನ್ನು ಹೊರಗೆ ಇಡಲಾಗಿದೆ. ಈ ಕುರಿತು ನಿವೃತ್ತ ಐಎಎಸ್‌, ಕೆಎಎಸ್‌ ಅಧಿಕಾರಿಗಳಿಂದ ಸಲಹೆ ಪಡೆದುಕೊಂಡು ಮುಂದಿನ ದಿನಗಳಲ್ಲಿ ಹೋರಾಟ, ವರದಿ ತಿರಸ್ಕಾರ ಹಾಗೂ ನಿಷ್ಪಕ್ಷಪಾತವಾಗಿ ಮರು ಸಮೀಕ್ಷೆ ಮಾಡುವಂತೆ ಒತ್ತಾಯಿಸುವುದು ಸಭೆಯ ಉದ್ದೇಶವಾಗಿದೆ.

ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದಲ್ಲಿನ ಮೀಸಲಾತಿ ಕಡಿಮೆ ಮಾಡಿ ಬೇರೆ ಸಮುದಾಯಗಳಿಗೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರಕಾರ ಜಾತಿಗಣತಿ ವರದಿ ಸಿದ್ಧಪಡಿಸಿದಂತಿದೆ ಎಂದು ವೀರಶೈವ ಮಹಾಸಭಾ ಅಧ್ಯಕ್ಷ ಎನ್. ತಿಪ್ಪಣ್ಣ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ