ಸಿಐಡಿ ಡಿಐಜಿ ಸೋನಿಯಾ ನಾರಂಗ್ ಜೊತೆ ತಿಕ್ಕಾಟ: ಎಸ್ ಪಿ ಮಧುರಾ ವೀಣಾ ಎತ್ತಂಗಡಿ
ಸಿಐಡಿ ಡಿಐಜಿ ಸೋನಿಯಾ ನಾರಂಗ್ ವಿರುದ್ಧ ಜಾತಿ ನಿಂದನೆ ಆರೋಪ ಹೊರಿಸಿದ್ದ ಸಿಐಡಿ ಎಸ್ ಪಿ ಮಧುರಾ ವೀಣಾ ಅವರನ್ನು ಗುಪ್ತಚರ ಇಲಾಖೆಗೆ ವರ್ಗಾವಣೆ...
ಬೆಂಗಳೂರು : ಸಿಐಡಿ ಡಿಐಜಿ ಸೋನಿಯಾ ನಾರಂಗ್ ವಿರುದ್ಧ ಜಾತಿ ನಿಂದನೆ ಆರೋಪ ಹೊರಿಸಿದ್ದ ಸಿಐಡಿ ಎಸ್ ಪಿ ಮಧುರಾ ವೀಣಾ ಅವರನ್ನು ಗುಪ್ತಚರ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ಲಂಚ ಪಡೆದ ಆರೋಪ ಹೊತ್ತು ತನಿಖೆ ಎದುರಿಸುತ್ತಿರುವ ಮಧುರವೀಣಾ ಅವರನ್ನು ರಾಜ್ಯ ಸರ್ಕಾರ ರಾಜ್ಯ ಗುಪ್ತದಳದ ಎಸ್ಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮಧುರವೀಣಾ ಅವರು ಬೆಂಗಳೂರಿನ ಹೊಟೇಲ್ ಒಂದರ ಮೇಲೆ ದಾಳಿ ನಡೆಸಿದ್ದ ವೇಳೆ ವೇಶ್ಯಾವಾಟಿಕೆ ಆರೋಪ ಹೊರಿಸಿ 2 ಲಕ್ಷ ರು. ಲಂಚ ಪಡೆದಿರುವ ಆರೋಪ ಎದುರಿಸುತ್ತಿದ್ದಾರೆ.
ಮಧುರವೀಣಾ ಅವರ ಮೇಲಿರುವ ಆರೋಪದ ಕುರಿತಾಗಿ ತನಿಖೆಗಾಗಿ ಸಿಐಡಿ ಆಂತರಿಕ ಭದ್ರತಾ ದಳದ ಐಜಿಪಿ ಮಾಲಿನಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.