ಕಲಬುರ್ಗಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದನ್ನೂರು ಗ್ರಾಮದ ಅರವಿಂದ್ ಕಾಂಬ್ಳೆ ಎಂದು ಗುರುತಿಸಲಾಗಿದೆ.
ಅರವಿಂದ್ ದ್ವಿತೀಯ ಪಿಯುಸಿಯಲ್ಲಿ ಇಂಗ್ಲೀಷ್ ಹಾಗೂ ಇತಿಹಾಸ ವಿಷಯದಲ್ಲಿ ಫೇಲ್ ಆಗಿದ್ದ. ಹೀಗಾಗಿ ನೊಂದ ವಿದ್ಯಾರ್ಥಿ ಗುರುವಾರ ಸಂಜೆ ತನ್ನ ಹೊಲದಲ್ಲಿ ಕೀಟನಾಶಕ ಕುಡಿದಿದ್ದು, ಕೂಡಲೇ ಆತನನ್ನು ಕಲಬುರ್ಗಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃತಪಟ್ಟಿದ್ದಾನೆ ಎಂದುಎಂದು ಪೊಲೀಸರು ತಿಳಿಸಿದ್ದಾರೆ.