ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಕಾರು ಅಪಘಾತ, ಬೆಂಗಳೂರಿನ ದಂಪತಿ ಸ್ಥಳದಲ್ಲೇ ಸಾವು

ಮಂಡ್ಯ ತಾಲೂಕಿನ ಸಂಗಾಪುರ ಬಳಿ ಕಾರು ಪಲ್ಟಿಯಾಗಿ ಬೆಂಗಳೂರಿನ ದಂಪತಿಗಳಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ಮಂಡ್ಯ: ಮಂಡ್ಯ ತಾಲೂಕಿನ ಸಂಗಾಪುರ ಬಳಿ ಕಾರು ಪಲ್ಟಿಯಾಗಿ ಬೆಂಗಳೂರಿನ ದಂಪತಿಗಳಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಬೆಂಗಳೂರಿನಿಂದ ಮೇಲುಕೋಟೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೆಂಗಳೂರಿನ ಭುವನೇಶ್ವರಿ ನಗರದ ಸೀತಾರಾಮ್ ರಾಜು(74) ಹಾಗೂ ರತ್ನಮ್ಮ(64) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರೆ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಧ್ಯಮಗಳ ನಿರ್ಬಂಧ ಸಂವಿಧಾನಬಾಹಿರ: ವೈಟ್ ಹೌಸ್ ಮಾಧ್ಯಮ ನಿಷೇಧಕ್ಕೆ ಕೋರ್ಟ್ ತಡೆ: ಟ್ರಂಪ್ ಆಡಳಿತಕ್ಕೆ ಮುಖಭಂಗ..!

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿಯಾಗುತ್ತಿದ್ದಂತೆ Xi Jinping ಶಾಂತಿ ಮಂತ್ರ; US-China ನಡುವೆ ಶುರುವಾಯ್ತಾ ಹೊಸ ಸ್ನೇಹ ಪರ್ವ?

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ; ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ