ರಾಜ್ಯ ಗೃಹ ಸಚಿವ ಪರಮೇಶ್ವರ್ 
ರಾಜ್ಯ

ಸಾಮೂಹಿಕ ಪ್ರತಿಭಟನೆ ಹಿಂಪಡೆಯುವಂತೆ ಪೇದೆಗಳಿಗೆ ಪರಮೇಶ್ವರ್ ಮನವಿ

ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದ್ದು, ಸಾಮೂಹಿಕ ಪ್ರತಿಭಟನೆ ತೀರ್ಮಾನವನ್ನು ಹಿಂಪಡೆಯುವಂತೆ ಪೇದೆಗಳಿಗೆ ರಾಜ್ಯ ಗೃಹ ಸಚಿವ ಪರಮೇಶ್ವರ್...

ಬೆಂಗಳೂರು: ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದ್ದು, ಸಾಮೂಹಿಕ ಪ್ರತಿಭಟನೆ ತೀರ್ಮಾನವನ್ನು ಹಿಂಪಡೆಯುವಂತೆ ಪೇದೆಗಳಿಗೆ ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರು ಮನವಿ ಮಾಡಿದ್ದಾರೆ.

ಈ ಕುರಿತಂತೆ ಶನಿವಾರ ಬೆಂಗಳೂರಿನ ವಿಕಾಸಸೌಧದಲ್ಲಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಭದ್ರತೆ ಒದಗಿಸುವ ಪೇದೆಗಳೇ ಪ್ರತಿಭಟನೆ ನಡೆಸಿದರೆ ಅವರ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಲು ಸಾಧ್ಯ. ಪೇದೆಗಳ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಈಗಾಗಲೇ ಖಾಲಿಯಿದ್ದ 25 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನು 8,500 ಪೊಲೀಸರು 6 ತಿಂಗಳಿನಲ್ಲಿ ಹುದ್ದೆಗೆ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಿದ್ದಾರೆ.
    
ಒಂದು ವೇಳೆ ಸರ್ಕಾರದ ಮನವಿಯನ್ನು ಧಿಕ್ಕರಿಸಿ ಪ್ರತಿಭಟನೆ ನಡೆಸಿದ್ದೇ ಪೋಲಿಸ್ ಪಡೆ (ಹಕ್ಕುಗಳ ನಿರ್ಬಂಧ) ಕಾಯ್ದೆ 1966 ಅಥವಾ ಪೊಲೀಸ್ ಮ್ಯಾನ್ಯುವಲ್ ರ ಅಡಿಯಲ್ಲಿ ಉಗ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ವೇತರ ತಾರತಮ್ಯ, ರಜೆ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘ ಜೂನ್ 4 ರಂದು ಸಾಮೂಹಿಕ ಪ್ರತಿಭಟನೆ ನಡೆಸಲು ತೀರ್ಮಾನಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!