ಸಾಂದರ್ಭಿಕ ಚಿತ್ರ 
ರಾಜ್ಯ

ಕ್ಯಾನ್ಸರ್ ಕಾರಕ ಬ್ರೊಮೇಟ್: ಬ್ರೆಡ್,ಬನ್,ಪರೀಕ್ಷೆಗೆ ರಾಜ್ಯ ಆರೋಗ್ಯ ಇಲಾಖೆ ಆದೇಶ

ರಾಜ್ಯ ಆರೋಗ್ಯ ಇಲಾಖೆಯು ಅವುಗಳ ಮಾದರಿಗಳನ್ನು ಪರೀಕ್ಷೆ ನಡೆಸುವಂತೆ ಆಹಾರ ಸುರಕ್ಷತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ...

ಬೆಂಗಳೂರು:  ಬ್ರೆಡ್‌, ಬನ್‌, ಪಿಜ್ಜಾ, ಬರ್ಗರ್‌ಗಳಲ್ಲಿ ಕ್ಯಾನ್ಸರ್‌ಕಾರಕ ಬ್ರೋಮೇಟ್‌ ಅಂಶಗಳಿರುವ ಆಘಾತಕಾರಿ ಅಂಶವನ್ನು ವಿಜ್ಞಾನ ಮತ್ತು ಪರಿಸರ ಕೇಂದ್ರ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಅವುಗಳ ಮಾದರಿಗಳನ್ನು ಪರೀಕ್ಷೆ ನಡೆಸುವಂತೆ ಆಹಾರ ಸುರಕ್ಷತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ರಾಜ್ಯದ ಆಹಾರ ಸುರಕ್ಷತೆ ಅಧಿಕಾರಿಗಳಿಗೆ ಈ ಕುರಿತು ಆದೇಶ ನೀಡಿರುವ ಆರೋಗ್ಯ ಸಚಿವ ಯು.ಟಿ.ಖಾದರ್‌, ಸರ್ಕಾರಿ ಸ್ವಾಮ್ಯದ ಪ್ರಯೋಗಾಲಯದಲ್ಲಿ ಬ್ರೆಡ್‌ ಮತ್ತಿತರ ಪದಾರ್ಥಗಳ ಮಾದರಿಗಳನ್ನು ಪರೀಕ್ಷೆಗೊಳಪಡಿಸಿ ಶೀಘ್ರದಲ್ಲಿಯೇ ವರದಿ ನೀಡುವಂತೆ ತಿಳಿಸಿದ್ದಾರೆ.

ಬ್ರೆಡ್‌ ಪದಾರ್ಥಗಳಲ್ಲಿ ರೋಗಕಾರಕ ಅಂಶಗಳು ಇರುವ ಕುರಿತು ಪರೀಕ್ಷೆ ನಡೆಸುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರದ ಆಹಾರ ಸುರಕ್ಷತೆ ಪ್ರಾಧಿಕಾರ ಸೂಚನೆ ನೀಡಬೇಕಾಗಿತ್ತು. ಆದರೆ, ಕೇಂದ್ರದಿಂದ ಯಾವುದೇ ಸೂಚನೆ ಬಾರದ ಕಾರಣ ರಾಜ್ಯ ಆರೋಗ್ಯ ಇಲಾಖೆಯೇ ಸ್ವಯಂ ಪ್ರೇರಿತವಾಗಿ ಬ್ರೆಡ್‌ ಪದಾರ್ಥಗಳ ಮಾದರಿಗಳನ್ನು ಪರೀಕ್ಷೆಗೊಳಪಡಿಸಲು ನಿರ್ಧರಿಸಿದೆ.

ಪ್ರಯೋಗಾಲಯ ನೀಡುವ ವರದಿಯನ್ನು ಮತ್ತೂಮ್ಮೆ ರಾಷ್ಟ್ರೀಯ ಮಾನ್ಯತೆ ಪಡೆದಿರುವ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗುವುದು. ತರುವಾಯ ಎರಡು ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿಯನ್ನೇ ಪದಚ್ಯುತಿಗೊಳಿಸುವ ಸಮಯ ಬಂದಿದೆ: ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ಕಿಡಿ

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಜಾಮೀನು‌ ಅರ್ಜಿ ವಜಾ, ಬಂಧನ ಭೀತಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್ ಸಲ್ಲಿಸಿದ ಪ್ರತಿಪಕ್ಷಗಳು; 100 ಕ್ಕೂ ಹೆಚ್ಚು ಸಂಸದರ ಬೆಂಬಲವಿದೆ- ಕಾಂಗ್ರೆಸ್

ಬ್ಯಾಟ್‌ನಲ್ಲಿ ರಬ್ಬರ್ ಇದೆ: Indian ಬ್ಯಾಟರ್ ಅಭಿಷೇಕ್ ಶರ್ಮಾ ವಿರುದ್ಧ ಶ್ರೀಲಂಕಾ ಬ್ಯಾಟರ್‌ನಿಂದ ಬ್ಯಾಟ್ ಟ್ಯಾಂಪರಿಂಗ್ ಆರೋಪ!

ಬಾಯಿ ಮುಚ್ಚಿಕೊಂಡು ಇರಬೇಕೆಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು; ನಾನು-ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT