ಪರುಚೂರಿ ಸುರೇಂದ್ರ ಕುಮಾರ್ 
ರಾಜ್ಯ

ಉದ್ಯಮಿ ಸುರೇಂದ್ರ ಕುಮಾರ್ ಕೊಲೆ ಪ್ರಕರಣ; ಪರಿಚಯಸ್ಥರ ಕೈವಾಡ ಶಂಕೆ

ಉದ್ಯಮಿ ಸುರೇಂದ್ರಕುಮಾರ್ ಪರುಚೂರಿ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಪರಿಚಯಸ್ಥರೇ ಕೃತ್ಯ ನಡೆಸಿರಬಹುದು ಎಂದು ಪೊಲೀಸರು ಶಂಕೆ ...

ಬೆಂಗಳೂರು;  ಉದ್ಯಮಿ ಸುರೇಂದ್ರಕುಮಾರ್ ಪರುಚೂರಿ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಪರಿಚಯಸ್ಥರೇ ಕೃತ್ಯ ನಡೆಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸುರೇಂದ್ರ ಕುಮಾರ್ ಅವರ ಕಂಪನಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಹಲವು ಮಾಹಿತಿ ಕಲೆ ಹಾಕಿದ್ದಾರೆ. ಭಾನುವಾರ ರಾತ್ರಿ ಸಂಜಯನಗರದ ಮನೆಯಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಸುರೇಂದ್ರ ಕುಮಾರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿ ಪರಾರಿಯಾಗಿದ್ದರು.

ಹಂತಕರ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಒಂದು ತಂಡ ಗುಂಟೂರಿಗೆ ಹೋಗಿದ್ದರೆ, ಮತ್ತೊಂದು ತಂಡ ಮಥುರಾಗೆ  ತೆರಳಿದೆ. ಇನ್ನುಳಿದ ತಂಡಗಳು ನಗರದಲ್ಲೇ ಇರುವ ಮೃತರ  ಸ್ನೇಹಿತರು, ಸಂಬಂಧಿಗಳು ಹಾಗೂ ಅವರ ಒಡೆತನದ ಗ್ಲೋಬಲ್‌ ಸೆಕ್ಯುರಿಟಿ ಸರ್ವಿಸ್‌ ನಲ್ಲಿ ಕೆಲಸ ಮಾಡುತ್ತಿದ್ದ 30 ಭದ್ರತಾ ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತಿವೆ. ಅದೇ ರೀತಿ ಸುರೇಂದ್ರ ಅವರ ಒಡೆತನದ ಪರುಚೂರಿ ಗ್ಲೋಬಲ್‌ ಫೌಂಡೇಷನ್ ಕಂಪೆನಿಯ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಪಿಲ್ ಅವರನ್ನು ಮಥುರಾದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ.

ಕಂಪೆನಿಯ ಹಣ ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಕಪಿಲ್ ವಿರುದ್ಧ ಸುರೇಂದ್ರ ಆರ್‌.ಟಿ. ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ, ಉತ್ತರ ಪ್ರದೇಶದ ಸ್ಥಳೀಯ ನ್ಯಾಯಾಲಯದಲ್ಲಿ 12 ಮೊಕದ್ದಮೆಗಳನ್ನು ಹೂಡಿದ್ದರು.8 ತಿಂಗಳ ಹಿಂದೆ ಕಪಿಲ್  ಸುರೇಂದ್ರ ಕುಮಾರ್ ಅವರಿಗೆ ಬೆದರಿಕೆ ಒಡ್ಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿರುವ ಪೊಲೀಸರಿಗೆ ಹಂತಕರ ಬಗ್ಗೆ ಕೆಲವು ಸುಳಿವು ಸಿಕ್ಕಿದ್ದು, ಈಗಲೇ ಅದನ್ನು ಬಹಿರಂಗ ಪಡಿಸಲಾಗದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!