ರಾಜ್ಯ

ಭೂಹಗರಣ: ಬಿಜೆಪಿ ಮುಖಂಡರುಗಳ ವಿರುದ್ಧದ ಕೇಸ್ ರದ್ಧು

Shilpa D

ಬೆಂಗಳೂರು: ಬಿಜೆಪಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಬಿಜೆಪಿ ಮುಖಂಡರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ಗುರುವಾರ ರದ್ದುಗೊಳಿಸಿದ್ದು, ಇದರಿಂದ ಬಿಜೆಪಿ ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಕಟ್ಟಾ ಸುಬ್ರಮಣ್ಯ ನಾಯ್ಡು , ಶಾಸಕ ಎಸ್.ಆರ್.ವಿಶ್ವನಾಥ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರಾಜು ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾ.ಆನಂದ ಭೈರಾರೆಡ್ಡಿ ಅವರು ರದ್ದುಗೊಳಿಸಿ ಆದೇಶ ನೀಡಿದ್ದಾರೆ.

ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮೇಲಿದ್ದ ಕೆಐಎಡಿಬಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕೋರ್ಟ್‍ನಲ್ಲಿ ದಾಖಲಾಗಿದ್ದ ಬಂಡೆ ಕೊಡಿಗೇಹಳ್ಳಿಯ ಜಮೀನು ದಾಖಲೆಗಳನ್ನು ತಿದ್ದಿದ ಆರೋಪವನ್ನು ಹೈಕೋರ್ಟ್ ವಜಾಗೊಳಿಸಿದೆ. ಇದು ಕಟ್ಟಾಸುಬ್ರಹ್ಮಣ್ಯ ನಾಯ್ಡು ಅವರು ಒಬ್ಬರು ತೆಗೆದುಕೊಳ್ಳುವ ತೀರ್ಮಾನವಲ್ಲ. ಅಲ್ಲಿ ಸಮಿತಿ ಇರುತ್ತದೆ. ಸಮಿತಿ ತೀರ್ಮಾನ ತೆಗೆದುಕೊಂಡು ಕೆಐಎಡಿಬಿಗೆ ಜಮೀನು ನೀಡಲಾಗಿದೆ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್ ಈ ಸಂಬಂಧ ಲೋಕಾಯುಕ್ತದಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದೆ.

SCROLL FOR NEXT