ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯ ಪ್ರಮುಖ ಕಿಂಗ್ ಪಿನ್ ಅಸೀಂ ಷರೀಫ್ ಬಂಧನ
ನಗರದಲ್ಲಿ ಸಂಚಲನ ಸೃಷ್ಠಿಸಿದ್ದ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಕಾರ್ಯಕರ್ತ ರುದ್ರೇಶ್ ಹತ್ಯೆಯ ಪ್ರಮುಖ ಕಿಂಗ್ ಪಿನ್ ಪಾಪ್ಯುಲರ್...
ಬೆಂಗಳೂರು: ನಗರದಲ್ಲಿ ಸಂಚಲನ ಸೃಷ್ಠಿಸಿದ್ದ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಕಾರ್ಯಕರ್ತ ರುದ್ರೇಶ್ ಹತ್ಯೆಯ ಪ್ರಮುಖ ಕಿಂಗ್ ಪಿನ್ ಪಾಪ್ಯುಲರ್ ಫ್ರಂಟ್ ನ ಜಿಲ್ಲಾಧ್ಯಕ್ಷ ಅಸೀಂ ಷರೀಫ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳಗಿನ ಜಾವ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಅಸೀಂ ಷರೀಫ್ ನನ್ನು ಬಂಧಿಸಿದ್ದಾರೆ. ಇದರೊಂದಿಗೆ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟಾರೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರು ಪೊಲೀಸರು ಮೊದಲಿಗೆ ಜೆಸಿ ನಗರದ ಮೊಹಮ್ಮದ್ ಸಾದಿಕ್ ಅಲಿಯಾಸ್ ಮಹಮ್ಮದ್ ಮಜರ್, ಆರ್.ಟಿ ನಗರದ ಮೊಹಮ್ಮದ್ ಮುಜೀಬುಲ್ಲಾ ಅಲಿಯಾಸ್ ಮೌಲ, ಆಸ್ಟಿನ್ ಟೌನ್ ನ ವಾಸೀಂ ಹಾಗೂ ಕೆಜಿ ಹಳ್ಳಿಯ ಗೋವಿಂದಪುರದ ಇರ್ಫಾನ್ ನನ್ನು ವಶಕ್ಕೆ ಪಡೆದಿದ್ದು ಇದೀಗ ಪ್ರಕರಣದ ಕಿಂಗ್ ಪಿನ್ ಎಂದು ಹೇಳಲಾಗುತ್ತಿದ್ದ ಅಸೀಂ ಷರೀಫ್ ನನ್ನು ಬಂಧಿಸಿದ್ದಾರೆ.
ಅಕ್ಟೋಬರ್ 16ರಂದು ಆರ್ಎಸ್ಎಸ್ ಪಥ ಸಂಚಲನ ಮುಗಿದ ಬಳಿಕ ಮಧ್ಯಾಹ್ನ 12.30ರ ಸುಮಾರಿಗೆ ಕಮರ್ಷಿಯಲ್ ಸ್ಟ್ರೀಟ್ ನ ಕಾಮರಾಜ ರಸ್ತೆ ಶಿವಾಜಿ ವೃತ್ತ ಸಮೀಪ ರುದ್ರೇಶ್ ನನ್ನು ಕುತ್ತಿಗೆಗೆ ತಲ್ವಾರ್ ನಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.