ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಸ್ಟೀಲ್ ಫ್ಲೈಓವರ್ ನಿರ್ಮಾಣ ಸದ್ಯಕ್ಕಿಲ್ಲ: ಹೈಕೋರ್ಟ್ ಗೆ ಬಿಡಿಎ ವಾಗ್ದಾನ

ತೀವ್ರ ವಿವಾದಕ್ಕೊಳಗಾಗಿರುವ ರಾಜ್ಯ ಸರ್ಕಾರದ ಬಹುನಿರೀಕ್ಷಿತ ಸ್ಟೀಲ್ ಫ್ಲೈಓವರ್ (ಉಕ್ಕಿನ ಸೇತುವೆ) ನಿರ್ಮಾಣ ಸದ್ಯಕ್ಕೆ ಕೈಗೆತ್ತಿಕೊಳ್ಳುತ್ತಿಲ್ಲ...

ಹೈಕೋರ್ಟ್
Lingaraj Badiger
Updated On : 3 Nov 2016, 7:11 am
ಬೆಂಗಳೂರು: ತೀವ್ರ ವಿವಾದಕ್ಕೊಳಗಾಗಿರುವ ರಾಜ್ಯ ಸರ್ಕಾರದ ಬಹುನಿರೀಕ್ಷಿತ ಸ್ಟೀಲ್ ಫ್ಲೈಓವರ್ (ಉಕ್ಕಿನ ಸೇತುವೆ) ನಿರ್ಮಾಣ ಸದ್ಯಕ್ಕೆ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಗುರುವಾರ ಹೈಕೋರ್ಟ್ ಗೆ ಮುಚ್ಚಳಿಕೆ ಬರೆದುಕೊಟ್ಟಿದೆ.
ಸ್ಟೀಲ್ ಫ್ಲೈಓವರ್ ನಿರ್ಮಾಣಕ್ಕೆ ತಡೆ ಕೋರಿ ನಮ್ಮ ಬೆಂಗಳೂರು ಪ್ರತಿಷ್ಠಾನ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಬಿಡಿಎ ವಕೀಲರು ಸದ್ಯ ಸ್ಟೀಲ್ ಫ್ಲೈಓವರ್ ಯೋಜನೆ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ತಿಳಿಸಿದರು. 
ಬಸವೇಶ್ವರ ವೃತ್ತದಿಂದ ಹೆಬ್ಬಾಳದ ಎಸ್ಟೀಮ್ ಮಾಲ್ ವರೆಗಿನ ಉದ್ದೇಶಿತ ಉಕ್ಕಿನ ಮೇಲ್ಸೇತುವೆ ನಿರ್ಮಾಣ ಸಾಧ್ಯತೆ ಬಾಧ್ಯತೆ, ಕಾನೂನಿನ ತೊಡಕು, ಸಂವಿಧಾನಿಕ ವಿಷಯಗಳನ್ನು ಪರಿಗಣಿಸಿ ಈ ಬಗ್ಗೆ ತೀರ್ಪು ನೀಡುವುದಾಗಿ ಹೈಕೋರ್ಟ್ ಹೇಳಿದೆ.

Advertisement

Advertisement

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ)ದ ದಕ್ಷಿಣ ಪೀಠ ಈಗಾಗಲೇ ಸ್ಟೀಲ್ ಫ್ಲೈಓವರ್ ನಿರ್ಮಾಣಕ್ಕೆ ತಡೆ ನಾಲ್ಕು ವಾರಗಳ ಕಾಲ ಮಧ್ಯಂತರ ತಡೆ ನೀಡಿದ್ದು, ತಡೆಯಾಜ್ಞೆ ತೆರವುಗೊಳಿಸುವಂತೆ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.
ಸುಮಾರು 6.7 ಕಿಲೋ ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ1,761 ಕೋಟಿ ರು ಎಂದು ಅಂದಾಜು ವೆಚ್ಚ ನಿಗದಿ ಮಾಡಲಾಗಿದೆ.ಸ್ಟೀಲ್ ಫ್ಲೈಓವರ್ ಬೇಕು ಹಾಗೂ ಬೇಡ ಎಂದು ನಾಗರಿಕರು ನಡೆಸಿದ ಪ್ರತಿಭಟನೆಗಳು, ಅಹವಾಲುಗಳು, ತಜ್ಞರ ವರದಿಗಳನ್ನು ಕೂಡಾ ಹೈಕೋರ್ಟ್ ಪರಿಶೀಲಿಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments