ಬೆಂಗಳೂರು: ಕೆಐಎಡಿಬಿ ಭೂ ಹಗರಣದ ವಿಚಾರಣೆ ರದ್ದಾದ ಬೆನ್ನಲ್ಲೇ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟೇಶ್ ಪಿ ದಳವಾಯಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಹೈಕೋರ್ಟ್ ನಲ್ಲಿ ಲೋಕಾಯುಕ್ತ ಸಂಸ್ಥೆ ಪ್ರತಿನಿಧಿಸುತ್ತಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟೇಶ್ ಅವರು ಸರ್ಕಾರ ಮತ್ತು ಲೋಕಾಯುಕ್ತರ ಕ್ರಮದಿಂದ ಬೇಸರವಾಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಕೆಐಎಡಿಬಿ ಭೂ ಹಗರಣ ಪ್ರಕರಣದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ಖುಲಾಸೆ ಮಾಡಿತ್ತು. ಇನ್ನು ಇಟಾಸ್ಕ ಕಂಪನಿ ವ್ಯವಸ್ಥಾಪಕ ಎಸ್.ಕೆ ಶ್ರೀನಿವಾಸ ವಿರುದ್ಧದ ದೋಷಾರೋಪ ಪಟ್ಟಿಯನ್ನು ನ್ಯಾಯಮೂರ್ತಿ ಪಿಡಿ ವೈಂಗಣಕರ ಅವರಿದ್ದ ಏಕಸದಸ್ಯ ಪೀಠ ರದ್ದುಗೊಳಿಸಿತ್ತು. ಎಲ್ಲಾ ಬೆಳವಣಿಗೆಯಿಂದ ಬೇಸತ್ತು ಅವರು ರಾಜಿನಾಮೆ ನೀಡಿದ್ದಾರೆ.
ರಾಜಿನಾಮೆ ಪತ್ರದಲ್ಲಿ ವೆಂಕಟೇಶ್ ಅವರು ಗಂಭೀರ ಪ್ರಕರಣಗಳ ವಿಷಯದಲ್ಲಿ ರಾಜ್ಯ ಸರ್ಕಾರ ತಟಸ್ಥವಾಗಿದೆ. ಈ ಬೆಳವಣಿಗೆ ನನಗೆ ತೀರಾ ದುರದೃಷ್ಟಕರ ಎನಿಸುತ್ತಿದೆ. ಇನ್ನು ಮುಂದೆ ಲೋಕಾಯುಕ್ತ ಸಂಸ್ಥೆಯನ್ನು ಪ್ರತಿನಿಧಿಸಲು ನನ್ನ ಆತ್ಮಸಾಕ್ಷಿ ಒಪ್ಪುತಿಲ್ಲ ಎಂದು ಬರೆದಿದ್ದಾರೆ.