ಮೈಸೂರಿನಲ್ಲಿ ಬಿಜೆಪಿ ಮುಖಂಡನ ಅನುಮಾನಾಸ್ಪದ ಸಾವು 
ರಾಜ್ಯ

ಮೈಸೂರಿನಲ್ಲಿ ಬಿಜೆಪಿ ಮುಖಂಡನ ಅನುಮಾನಾಸ್ಪದ ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ಮುಖಂಡರ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಮೈಸೂರಿನಲ್ಲಿ ಸ್ಥಳೀಯ ಬಿಜೆಪಿ ಮುಖಂಡ ರವಿ ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ವರದಿಯಾಗಿದೆ.

ಮೈಸೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ಮುಖಂಡರ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಮೈಸೂರಿನಲ್ಲಿ ಸ್ಥಳೀಯ ಬಿಜೆಪಿ ಮುಖಂಡ ರವಿ ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ವರದಿಯಾಗಿದೆ. 
ತಾಲೂಕು ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮಾಗಳಿಯ ರವಿ, ಪಕ್ಷ ಸಂಘಟನೆ, ಸ್ಥಳೀಯ ರಾಜಕಾರಣದಲ್ಲಿ ಸಕ್ರಿಯವಾಗಿದ್ದರು, ನ.4 ರಂದು ರಾತ್ರಿ ಸಭೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ರವಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದ್ದು, ಮಾಗಳಿ ಹೊರವಲಯದಲ್ಲಿ ಅವರ ಶವ ಪತ್ತೆಯಾಗಿದೆ. 
ರವಿ ಅವರ ತಲೆಗೆ ಗಂಭೀರ ಗಾಯಗಳಾಗಿದೆ. ಬಿಜೆಪಿ ಮುಖಂಡನ ಅನುಮಾನಾಸ್ಪದ ಸಾವಿನ ಬಗ್ಗೆ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮಿತ್ ಶಾ ಭೇಟಿ ಮಾಡಿದ ಸಿಎಂ ಡಿಕೆಶಿ; ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಮನವಿ

ಕೋಲ್ಕತಾ ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಚುನಾವಣೆಯಲ್ಲಿ ಬಳಸಲಾಗಿದ್ದ 4,000 ಇವಿಎಂ ಭಸ್ಮ; ಅವಘಡದ ಸುತ್ತ ಅನುಮಾನದ ಹುತ್ತ!

ಇರಾನ್ ಸಂಘರ್ಷ: ಯೋಜನೆಗಳನ್ನು ನೆತನ್ಯಾಹು ಅವರಿಂದ ಮುಚ್ಚಿಟ್ಟ ಟ್ರಂಪ್; ಇಸ್ರೇಲ್ ಪ್ರಧಾನಿ ಬೆನ್ನಿಗೆ ಅಮೆರಿಕ ಅಧ್ಯಕ್ಷರ ಚೂರಿ?

ಬಾಲಿವುಡ್​ನಲ್ಲಿ 'ಪಾಕ್ ಮೇಲಿನ ಪ್ರೀತಿ' ಇನ್ನೂ ಕಮ್ಮಿಯಾಗಿಲ್ಲ: ರಣವೀರ್​ ಸಿಂಗ್ ನಿಷೇಧಕ್ಕೆ ಕಂಗನಾ ಗರಂ!​

ಬ್ಯಾಂಕಾಕ್ ನಿಂದ ಮುಂಬೈ ಗೆ 11.82 ಕೋಟಿ ರೂ ಮೌಲ್ಯದ ಗಾಂಜಾ ಸಾಗಣೆ: ಮಾಜಿ ಮಿಸೆಸ್ ಕೇರಳ ಬಂಧನ!

SCROLL FOR NEXT